ಕೋಲಾರ, ಆಗಸ್ಟ್ 23,2023(www.justkannada.in): ಒಂದೇ ರಿಜಿಸ್ಟ್ರೇಷನ್ ನಂಬರ್ ನ ಎರಡು ಖಾಸಗಿ ಬಸ್ ಗಳನ್ನು ಆರ್ಟಿಒ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕೋಲಾರ ಜಿಲ್ಲೆಯ ಕೆಜಿಎಫ್ ಗೆ ಸೇರಿದ ರಸ್ತೆ ಸಾರಿಗೆ ಸಂಸ್ಥೆಯ (ಆರ್.ಟಿ.ಓ) ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಎರಡು ಬಸ್ ಗಳು ತಮಿಳುನಾಡಿನ ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ಗೆ ಸೇರಿದ್ದಾಗಿದ್ದು, ಒಂದೇ ರಿಜಿಸ್ಟ್ರೇಷನ್ ನಂಬರ್ ಅನ್ನು ಎರಡು ಬಸ್ ಗಳಿಗೆ ಹಾಕಿಕೊಂಡು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಿದ್ದಾರೆ.
ಇದೀಗ ಬಸ್ ಗಳನ್ನ ಆರ್ ಟಿ ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Key words: Two -private- buses – same number- seized-RTO –officials