ಬೆಂಗಳೂರು,ಫೆಬ್ರವರಿ, 06,2021(www.justkannada.in) : ಸುಮಾರು ಎರಡು ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ‘4ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮರು ಸ್ಥಾಪಿಸಲಾಗಿದೆ.ಈ ಕುರಿತು ಟ್ವೀಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಆಡಳಿತದ ವಕ್ತಾರ ರೋಹಿತ್ ಕನ್ಸಾಲ್ ಅವರು, ‘4ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಇಡೀ ಜಮ್ಮು ಮತ್ತು ಕಾಶ್ಮೀರದಲ್ಲಿ ಮರು ಸ್ಥಾಪಿಸಲಾಗಿದೆ’ ಎಂದು ಹೇಳಿದ್ದಾರೆ.
ಕೃಪೆ : internet
ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು ಎರಡು ವರ್ಷಗಳ ನಂತರ 4ಜಿ- ಹೈಸ್ಪೀಡ್ ಮೊಬೈಲ್ ಇಂಟರ್ನೆಟ್ ಸೇವೆ ತಡರಾತ್ರಿಯಿಂದ ಮರುಸ್ಥಾಪಿಸಲಾಗಿದೆ. 2019ರ ಆಗಸ್ಟ್ ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ, ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕಣಿವೆಯಲ್ಲಿ ಹೈಸ್ಪೀಡ್ ಇಂಟರ್ನೆಟ್ ಮೊಬೈಲ್ ಸೇವೆ ರದ್ದುಗೊಳಿಸಲಾಗಿತ್ತು.
key words : Two-Years-Jammu and Kashmir-4G Mobile-Internet-Service