ನವದೆಹಲಿ,ಆಗಸ್ಟ್,27,2022(www.justkannada.in): ಸುಪ್ರೀಂ ಕೋರ್ಟ್ ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಇಂದು ಯುಯು ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ಪ್ರಮಾಣವಚನ ಬೋಧಿಸಿದರು.
Key words: U.U. Lalit -sworn – 49th- Chief Justice – Supreme Court.