ಮೈಸೂರು, ಮಾ.೨೪,೨೦೨೫ : ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿ ಪೊಲೀಸರಿಂದ ಬಂಧಿತನಾಗಿರುವ ಮೌಲ್ವಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ.
ಉದಯಗಿರಿ ಗಲಭೆ ಪ್ರಕರಣ ಬಳಿಕ ಮೈಸೂರು ಸಿಸಿಬಿ ಪೊಲೀಸರು ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ವಶಕ್ಕೆ ಪಡೆದು ನ್ಯಾಯಾಲಯದಲ್ಲಿ ಹಾಜರು ಪಡಿಸಿದ್ದರು. ಘಟನೆ ನಡೆದು 11 ದಿನಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಬಳಿಕ ಆರೋಪಿ ಮೌಲ್ವಿ ಜಾಮೀನು ಅರ್ಜಿ ಸಲ್ಲಿಸಿದ್ದ. ಇದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಆರೋಪಿ ಜಾಮೀನು ಅರ್ಜಿ ವಜಾಗೊಳಿಸಿದೆ.
ಘಟನೆ ಹಿನ್ನೆಲೆ:
ಉದಯಗಿರಿ ಗಲಭೆಗೆ ಆರೋಪಿ ಮೌಲ್ವಿ ಮುಸ್ತಾಕ್ ಪ್ರಚೋದನಾಕಾರಿ ಭಾಷಣವೇ ಕಾರಣ ಎಂದು ಹೇಳಲಾಗುತ್ತಿತ್ತು. ಹೀಗಾಗಿ, ಆರೋಪಿಯ ಬಂಧನಕ್ಕೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು.
ಸೋಷಿಯಲ್ ಮಿಡೀಯಾದಲ್ಲಿ ವ್ಯಕ್ತಿಯೊಬ್ಬ ಮಾಡಿದ್ದ ಪೋಸ್ಟ್ ವೊಂದು ಒಂದು ಸಮುದಾಯವನ್ನು ಕೆರಳಿಸಿತ್ತು. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಯುವಕನೋರ್ವ ಸಂಸದ ರಾಹುಲ್ ಗಾಂಧಿ, ಉತತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿವಸ್ತ್ರಗೊಳಿಸಿ, ಭಾವಚಿತ್ರಕ್ಕೆ ತಲೆ ಮೇಲೆ ಮುಸ್ಲಿಮರು ಬಳಸುವ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದ ಬರೆದು ಪೋಸ್ಟ್ ಮಾಡಿದ್ದ. ಇದು ಮುಸ್ಲಿಂ ಸಮುದಾಯದವರು ಕೆರಳುವಂತೆ ಮಾಡಿತ್ತು.
ಬಳಿಕ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದರು. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.
ಈ ನಡುವೆ ಗಲಭೆಗೆ ಕಾರಣವೆಂದು ಹೇಳಲಾಗುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋದಲ್ಲಿ ಧರ್ಮ ರಕ್ಷಣೆಗೆ ಬದ್ಧತೆ ನಿನ್ನೆಯೂ ಇತ್ತು, ಇವತ್ತು ಇದೆ. ಎಲ್ಲರೂ ಘೋಷಣೆ ಕೂಗಿ, ನಾವು ಪ್ರಾಣ ಬೇಕಾದರೂ ಕೊಡುತ್ತೇವೆ. ಸದಾ ಮುಸ್ಲಿಮನ್ನು ಗುರಿ ಮಾಡಲಾಗುತ್ತಿದೆ. ಸುರೇಶ್ ಹೆಸರಿನ ನಾಯಿ, ಸುರೇಶ್ ಹೆಸರಿನ ಹರಾಮಿ ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು ಮರಣದಂಡನೆ ವಿಧಿಸಬೇಕು. ನಿಮ್ಮ ಇಚ್ಛೆ ಏನು? ಆತನಿಗೆ ಮರಣದಂಡನೆಯಾಗಬೇಕು ಎಂಬುವುದು. ಮೈಸೂರಿನ ಎಲ್ಲ ಮುಸ್ಲಿಂರು ಒಂದಾಗಿ. ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ ಎಂದು ಭಾಷಣ ಮಾಡಿದ್ದ. ಈ ವಿಡಿಯೋ ವೈರಲ್ ಆಗಿತ್ತು.
key words: maulvi, arrested, police, inflammatory speeches, Udayagiri police station, Mysore. communal clash.
SUMMARY:
The court dismissed the bail plea of a maulvi, who was arrested by the police for making inflammatory speeches in connection with the stone-pelting incident at Udayagiri police station, Mysore.