ಬೆಂಗಳೂರು,ಜನವರಿ,18,2021(www.justkannada.in) : ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ. ಬೆಳಗಾವಿ ನಮ್ಮದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ.ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಸಿಎಂ ಬಿ.ಎಸ್.ವೈ ಅವರು, ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಹೇಳಿದ್ದಾರೆ.
ಉದ್ಧವ್ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ತಿಳಿಸಿದರು.
ENGLISH SUMMARY….
“Uddhav Thackarey’s statement condemnable”: Former CM Siddamaraiah
Bengaluru, Jan.18. 2021 (www.justkannada.in): “Maharashtra Chief Minister Uddha Thackarey’s statement on Belagavi is condemnable. Belagavi is an inseparable part of Karnataka. Please don’t poke your nose in an issue, which is already settled. Belagavi is ours,” former Chief Minister Siddaramaiah has opined.
The former CM in his tweet has clearly stated that the Mahajan report is final concerning the identification of Belagavi border. I warn Maharashtra CM Uddhav Thackeray not to stir in an issue which is already settled. Please don’t forget that now you are in a responsible position.
He also has explained Uddhav Thackeray that Kannadigas are always peace-loving people, tolerant, and believe in peaceful coexistence and also has warned him not to consider our tolerance as weakness.
Siddaramaiah also has demanded Chief Minister B.S. Yedyurappa to give a fitting reply officially.
Keywords: Uddhav Thackrey/ Belagavi/ Belagavi border/ former CM Siddaramaiah/ condemnable
key words : Uddhav-Thackeray-Hyperlinked-Statement-Reprehensible-Former CM-Siddaramaiah