ಬೆಳಗಾವಿ,ಡಿಸೆಂಬರ್,27,2022(www.justkannada.in): ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ನಲ್ಲಿ ವಿಚಾರಣೆ ಮುಗಿಯುವವರೆಗೂ ಬೆಳಗಾವಿ, ನಿಪ್ಪಾಣಿ ಸೇರಿ ಗಡಿಭಾಗವನ್ನ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಹೇಳಿಕೆ ನೀಡಿದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆಗೆ ಉನ್ನತ ಶಿಕ್ಷಣ ಸಚಿವ ಸಿ.ಎನ್ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಉದ್ಧವ್ ಠಾಕ್ರೆ ಮಾತಾಡುವ ಮುಂಚೆ ಸ್ವಲ್ಪ ಆಲೋಚಿದಬೇಕು. ಜನರ ಭಾವನೆಗೆ ಧಕ್ಕೆ ತರುವ ಕೆಲಸವನ್ನ ಉದ್ಧವ್ ಠಾಕ್ರೆ ಮಾಡುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡಿರುವುದು ರಾಜಕೀಯ ಪ್ರೇರಿತ. ಸ್ವಾರ್ಥಕ್ಕಾಗಿ ಅಶ್ವಥ್ ನಾರಾಯಣ್ ಬೇಡದ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Key words: Uddhav Thackeray- statement – border dispute-Minister -Aswath Narayan