ಮೈಸೂರು,ಜನವರಿ,18,2021(www.justkannada.in) : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
ಅವರ ಹೇಳಿಕೆಯು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವಾಗಿದೆ. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.
ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಸಲಹೆ ನೀಡಿದ್ದಾರೆ.
ENGLISH SUMMARY…..
“Uddhav Thackeray’s statement on Belagavi is arrogant”: CM BSY
Mysuru, Jan. 18, 2021 (www.justkannada.in): “Maharashtra Chief Minister Uddhav Thakarey’s statement on acquiring Marathi speaking parts of Belagavi is arrogant. It is against the Indian union system. Everyone knows that the Mahajan Commission report is final,” opined Chief Minister B.S. Yedyurappa.
“Giving irresponsible statements on region and language is always against the unity of our country. I strongly condemn his statement. Marathi and Kannadigas are living together peacefully in border areas. But it is very painful to see that the Maharashtra Chief Minister is inciting fire among the people. I advise him to respect our country’s Union ethics,” he added.
Keywords: CM B.S. Yedyurappa/ Uddhav Thackarey’s statement arrogant/ Maharashtra/ Belagavi/ border issue
key words : Uddhav Thackeray’s-statement-Lashes-display-CM B.S.Yeddyurappa