ಉಡುಪಿ,ಆಗಸ್ಟ್ ,4,2023(www.justkannada.in): ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಹಿಂದೂ ಸಂಘಟನೆ ಮತ್ತು ಬಿಜೆಪಿ ಮುಖಂಡರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜುಲೈ 28ರಂದು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್, ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಮುದ್ವೇಷ, ಧರ್ಮ ತಾರತಮ್ಯ ಆರೋಪದಡಿ ವೀಣಾ ಅವರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಪ್ರತಿಭಟನೆ ವೇಳೆ ಮಾತನಾಡಿದ್ದ ವಿಶ್ವ ಹಿಂದೂ ಪರಿಷತ್ ನ ಕನ್ನಡದ ಪ್ರಾಂತೀಯ ಕಾರ್ಯದರ್ಶಿ ಶರಣ್ , ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ಸಿದ್ಧರಾಗಬೇಕು ಎಂದು ಕರೆ ನೀಡಿದ್ದರು. ಇದೀಗ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
Key words: Udupi College- video- case-FIR -filed -against -protestors.