ಬೆಂಗಳೂರು, ಆಗಸ್ಟ್ 20, 2023 (www.justkannada.in): ಮಾಜಿ ಸಚಿವೆ ಉಮಾಶ್ರೀ, ಎಂ.ಆರ್.ಸೀತಾರಾಂ ಹಾಗೂ ಸುಧಾಮ್ದಾಸ್ ಪರಿಷತ್ ಅವರನ್ನು ಕಾಂಗ್ರೆಸ್ ವಿಧಾನಪರಿಷತ್ಗೆ ನಾಮನಿರ್ದೇಶನ ಮಾಡಿದೆ. ಇದಕ್ಕೆ ರಾಜ್ಯಪಾಲರ ಅಂಕಿತ ಹಾಕಿದ್ದಾರೆ.
ಈ ಕುರಿತು ರಾಜ್ಯಪಾಲರ ಅಂಕಿತ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದೆ.
ಸುಧಾಮ್ದಾಸ್ ನೇಮಕಕ್ಕೆ ಪಕ್ಷದ ಹಿರಿಯ ಸಚಿವರಿಂದಲೇ ವಿರೋಧ ವ್ಯಕ್ತವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಿತ ಸುಧಾಮ್ ದಾಸ್ ನೇಮಕಕ್ಕೆ ಹಿರಿಯ ಸಚಿವರು ಬಹಿರಂಗವಾಗಿ ಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಮೂಲಕ ನಟಿ ಉಮಾಶ್ರೀ ಸೇರಿದಂತೆ ಮೂವರು ವಿಧಾನಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನಕ್ಕೆ ರಾಜ್ಯಪಾಲರ ಅಂಕಿತವೂ ಸಿಕ್ಕಿದೆ.