ನವದೆಹಲಿ,ಫೆಬ್ರವರಿ,1,2025 (www.justkannada.in): ಇಂದು ಸಂಸತ್ ನಲ್ಲಿ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ 11ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವಾಲಯದಿಂದ ಬಜೆಟ್ ಪ್ರತಿಯೊಂದಿಗೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಈ ವೇಳೆ ರಾಷ್ಟ್ರಪತಿಗಳು ನಿರ್ಮಲಾ ಸೀತಾರಾಮನ್ ಅವರಿಗೆ ಸಿಹಿ ತಿನ್ನಿಸಿ ಕೇಂದ್ರ ಬಜೆಟ್ ಮಂಡನೆಗೆ ಶುಭ ಕೋರಿದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ಎಂಟನೇ ಬಜೆಟ್ ಇದಾಗಿದೆ. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಅವರು ಒಟ್ಟು 10 ಬಾರಿ ಬಜೆಟ್ ಮಂಡಿಸಿದ್ದರು.
Key words: Countdown, Union Budget, Union Finance Minister, Nirmala Sitharaman