ನವದೆಹಲಿ,ಫೆಬ್ರವರಿ,1,2025 (www.justkannada.in): ಇಂದು 2025-26 ನೇ ಸಾಲಿನ ಕೇಂದ್ರ ಬಜೆಟ್ ಕ್ಷಣಗಣನೆ ಆರಂಭವಾಗಿದ್ದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಹಲವು ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಮುಂದೆ ರಾಜ್ಯ ಸರ್ಕಾರ ಅಧಿಕೃತ ಬೇಡಿಕೆ ಪಟ್ಟಿ ಸಲ್ಲಿಸಿದೆ. ರಾಜ್ಯ ಸರ್ಕಾರ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಸೇರಿದಂತೆ ರಾಜ್ಯದ ಹಲವು ಯೋಜನೆಗಳಿಗೆ ಅನುದಾನದ ಬೇಡಿಕೆ ಇಟ್ಟಿದೆ.
ರಾಜ್ಯ ಸರ್ಕಾರ ಅಧಿಕೃತ ಬೇಡಿಕೆ ಪಟ್ಟಿ ಈ ಕೆಳಕಂಡಂತಿದೆ..
ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಅಭಿವೃದ್ಧಿ, ಪಶ್ಚಿಮ ಘಟ್ಟಗಳ ಅಭಿವೃದ್ಧಿ, ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ 5300 ಕೋಟಿ ಬಿಡುಗಡೆಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಮೇಕೆದಾಟು,ಮಹಾದಾಯಿ ಯೋಜನೆಗೆ ಅನುಮೋದನೆ,15 ಹಣಕಾಸು ಆಯೋಗ ಶಿಫಾರಸು ಮಾಡಿರುವ ವಿಶೇಷ ಅನುದಾನ 11,149 ಕೋಟಿ ಬಿಡುಗಡೆ, ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಹೆಚ್ಚಳ,ಪ್ರಧಾನ ಮಂತ್ರಿ ಅವಾಸ್ ಯೋಜನೆ 1.5 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ,ವಿಧವಾ ಪಿಂಚಣಿ,ಹಿರಿಯ ನಾಗರೀಕರ ಪಿಂಚಣಿಗೆ ಅನುದಾನ ಹೆಚ್ಚಳ,
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5000 ಕೋಟಿ, ಬೆಂಗಳೂರು ಹುಬ್ಬಳ್ಳಿ, ಮೈಸೂರು ನಗರಗಳ ಅಭಿವೃದ್ಧಿಗಾಗಿ ಸಮಗ್ರ ಯೋಜನೆ ಘೋಷಣೆ, ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳಿಗೆ ಸಾಲ ನೀಡಲು ಕೋರಿಕೆ
ಬೆಂಗಳೂರಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಸುಮಾರು 90 ಸಾವಿರ ಕೋಟಿ ಯೋಜನೆಗೆ ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಬೇಡಿಕೆ ಇಟ್ಟಿದೆ.
Key words: Union Budget, today, demands, state government