ಶ್ರೀನಗರ,ಏಪ್ರಿಲ್,23,2025 (www.justkannada.in): ನಿನ್ನೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯಲ್ಲಿ 25ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೃತದೇಹಗಳಿಗೆ ಅಂತಿಮ ನಮನ ಸಲ್ಲಿಸಿದರು.
ಪಹಲ್ಗಾಮ್ ಪ್ರವಾಸಿ ತಾಣದಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಮೃತದೇಹವನ್ನ ಜಮ್ಮು ಮತ್ತು ಕಾಶ್ಮೀರ ಸಶಸ್ತ್ರ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇರಿಸಲಾಗಿತ್ತು. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂತಿಮ ಗೌರವ ಸಲ್ಲಿಸಿ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಅವರು ನಿನ್ನೆ ರಾತ್ರಿ 1:00 ಗಂಟೆಯವರೆಗೆ ನಿರಂತರ ಸಭೆಗಳನ್ನು ನಡೆಸಿದ್ದಾರೆ. ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಬಿಡದಂತೆ ಭದ್ರತಾ ಪಡೆಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಉಗ್ರರ ದಾಳಿಯಲ್ಲಿ ಕರ್ನಾಟಕದ ಇಬ್ಬರು ಬಲಿಯಾಗಿದ್ದಾರೆ.
Key words: Pahalgam, terror attack, Union Minister, Amit Shah, last respects