ಬೆಂಗಳೂರು,ಫೆಬ್ರವರಿ,6,2023(www.justkannada.in): ದೇಶದಲ್ಲಿ 20% ಬಯೋ ಇಂಧನ ಬಳಕೆ ಹೆಚ್ಚಳ ಮಾಡಲು ಗುರಿ ಇಟ್ಟಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.
ಬೆಂಗಳೂರು ಉತ್ತರ ತಾಲೂಕಿನ ಮಾದಾವರದಲ್ಲಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಪರಿಸರ ಸ್ನೇಹಿ ಇಂಧನ ಬಳಕೆಗೆ ಹೊಸ ವೇಗ ನೀಡುವ ಪ್ರಯತ್ನ ಇದು. ಶೀಘ್ರದಲ್ಲೇ ಪರಿಸರ ಸ್ನೇಹಿ ವಾಹನ ಸಿದ‍್ಧ. ಇಂಧನ ಭದ್ರತೆ ಭಾರತದ ಪ್ರಮುಖ ಆದ್ಯತೆಯಾಗಿದೆ. ಮೋದಿ ನೀಡಿದ್ದ ಗುರಿಯನ್ನ ಈಗಲೇ ಸಾಧಿಸಿದ್ದೇವೆ . ಈ ಬಾರಿ ಬಜೆಟ್ ನಲ್ಲಿ 7 ಆದ್ಯತೆಗಳಲ್ಲಿ ಇದು ಒಂದಾಗಿದೆ ಎಂದರು.
ಭಾರತದಲ್ಲಿ ಎಲ್ಲರಿಗೂ ಕೈಗೆಟಕುವ ದರದಲ್ಲಿ ಇಂಧನ ಒದಗುವಂತೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 2030ರ ಒಳಗೆ ಭಾರತದಲ್ಲಿ ವಾಯುಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸತತ ಪರಿಶ್ರಮ ಹಾಕುತ್ತಿದೆ. ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸರ ಸ್ನೇಹಿ ಇಂಧನಕ್ಕೆ ನಾವು ಆದ್ಯತೆ ನೀಡಿದ್ದೇವೆ. ಆದರೆ ಅಭಿವೃದ್ಧಿಯ ವಿಚಾರದಲ್ಲಿ ರಾಜಿಯಾಗುತ್ತಿಲ್ಲ. ಸೂರ್ಯನ ಬೆಳಕಿನಿಂದ ಅಡುಗೆ ಮಾಡುವ ಸೋಲಾರ್ ಕುಕ್ಟಾಪ್ಗಳ ಬಳಕೆಗೆ ಇಂದು ಚಾಲನೆ ಸಿಗಲಿದೆ. ಈ ತಂತ್ರಜ್ಞಾನವನ್ನು ಭಾರತ ಹಂಚಿಕೊಳ್ಳಲಿದೆ. ಇದನ್ನು ಯಥಾವತ್ತಾಗಿ ಏಷ್ಯಾದ ಇತರ ದೇಶಗಳೂ ಬಳಸಬಹುದಾಗಿದೆ ಎಂದು ಹೇಳಿದರು.
Key words: Union Minister- Hardeep Singh Puri – increase -bio fuel- consumption – 20%