ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ ಸೇರಿ ಬಿಜೆಪಿ ನಾಯಕರ ವಿರುದ್ದ FIR ದಾಖಲು

ಬೆಂಗಳೂರು,ಸೆಪ್ಟಂಬರ್,28,2024 (www.justkannada.in):  ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್,  ಇಡಿ ಸೇರಿ ಬಿಜೆಪಿ ನಾಯಕರ ವಿರುದ್ದ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ  ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ A1 ಆರೋಪಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, A2 ಆರೋಪಿಯಾಗಿ ಇಡಿ, A3 ಕೇಂದ್ರ ಬಿಜೆಪಿ ಪದಾಧಿಕಾರಿಗಳು, A4 ಆರೋಪಿಯಾಗಿ ನಳಿನ್ ಕುಮಾರ್ ಕಟೀಲ್, A5 ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ A6 ಆರೋಪಿಗಳನ್ನಾಗಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ.

ಆದರ್ಶ ಅಯ್ಯರ್ ಎಂಬುವವರು ದೂರು ಆಧರಿಸಿ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ , ಬಿವೈ ವಿಜಯೇಂದ್ರ , ನಳೀನ್ ಕುಮಾರ್ ಕಟೀಲ್ ವಿರುದ್ದ ಎಫ್ ಐಆರ್ ದಾಖಲಿಸುವಂತೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿತ್ತು.

Key words: Union Minister, Nirmala Sitharaman, BJP leaders, , FIR