ಬೆಂಗಳೂರು,ಆ,27,2019(www.justkannada.in): ರಾಜ್ಯದಲ್ಲಿ ನೆರೆ ಹಾವಳಿ ಹಿನ್ನೆಲೆ ಎಲ್ಲಡೆ ಪ್ರವಾಸ ಮಾಡಿ ಪರಿಶೀಲನೆ ಕೈಗೊಳ್ಳಲಾಗುವುದು. ಎಷ್ಡು ನಷ್ಟವಾಗಿ ಬೆಳೆ ಹಾಳಾಗಿದೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುವುದು. ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡುತ್ತೇವೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಮಾಧ್ಯಮದ ಜತೆ ಇಂದು ಮಾತನಾಡಿದ ಸಚಿವ ಗೋವಿಂದ ಕಾರಜೋಳ, ನಾಳೆ ಲೋಕೋಪಯೋಗಿ ಇಲಾಖೆ ಸಭೆ ಕರೆಯಲಾಗಿದೆ. ವಿವರವಾದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಮಳೆಯಿಂದ ಹಾನಿಯಾದ ರಸ್ತೆಗಳನ್ನು ಸರಿಪಡಿಸಲು ಮೊದಲ ಆದ್ಯತೆ ನೀಡುತ್ತೇವೆ. ಸೇತವೆ, ಸರ್ಕಾರಿ ಕಟ್ಟಡಗಳನ್ನು ಸರಿಪಡಿಸುವ ಜವಾಬ್ದಾರಿ ಇದೆ. ನಿನ್ನೆಯವರೆಗೂ ಬಾಗಲಕೋಟೆ ಜಿಲ್ಲೆಯಲ್ಲಿ 40ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.
ನನ್ನನ್ನು ಕಳೆದ ಎಪತೈದು ವರ್ಷಗಳಿಂದ ಈ ರೀತಿ ಬೆಳವಣಿಗೆ ಕಾರಣರಾದ ಮುಧೋಳ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷದ ಕೇಂದ್ರ ವರಿಷ್ಠರು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಯಡಿಯೂರಪ್ಪ, ಬಿ.ಎಲ್ ಸಂತೋಷ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಸಮಾಜ ಕಲ್ಯಾಣ ಇಲಾಖೆ ನೋಂದವರ ದ್ವನಿಯಾಗಬೇಕು, ದಲಿತರಿಗೆ ಉತ್ತಮ ಕಾರ್ಯಕ್ರಮ ನೀಡಬೇಕು, ಎಸ್ ಸಿ. ಎಸ್.ಟಿ.ಯುವಕರಿಗೆ ಉದ್ಯೋಗ ಒದಗಿಸುವುದು ನಮ್ಮಗುರಿಯಾಗಿದೆ. ಆರ್ಥಿಕ ಪರಿಮಿತಿಯೊಳಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಕಾರಜೋಳ ಹೇಳಿದರು.
Key words: Union minister- Nitin Gadkari – appeal – relief-Minister -Govinda Karajola.