ಹುಬ್ಬಳ್ಳಿ, ಫೆಬ್ರವರಿ ,26,2025 (www.justkannada.in): ರಾಜ್ಯ ಸರ್ಕಾರ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ಗ್ಯಾರಂಟಿ ಘೋಷಿಸಿ ಈಗ ನಿತ್ಯ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಚಿತ ಗ್ಯಾರಟಿ ಘೋಷಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಅಧಿಕಾರಕ್ಕೆ ಬಂದ ಮೇಲೆ ಎಲ್ಲದರ ಬೆಲೆ ಹೆಚ್ಚಳ ಮಾಡುತ್ತಿದೆ. ಮನುಷ್ಯ ಸಾಯಬೇಕಾದ್ರೂ 50 ರೂ. ನೀಡಿ ಸಾಯಬೇಕು. ಸೂಸೂತ್ರವಾಗಿ ಸಾಯುವುದಕ್ಕಾದರೂ ಬಿಡಿ ಎಂದು ಲೇವಡಿ ಮಾಡಿದರು.
ಸಚಿವ ಪ್ರಿಯಾಂಕ್ ಖರ್ಗೆಯಿಂದ ದುರಂಹಕಾರದ ವರ್ತನೆ ಸರಿಯಲ್ಲ. ಪ್ರಿಯಾಂಕ್ ಖರ್ಗೆ ತಂದೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ನೋಡಿ ಕಲಿಯಬೇಕಿದೆ ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ ಬಸ ಕಂಡಕ್ಟರ್ ಮೇಲಿನ ಹಲ್ಲೆ ಅಕ್ಷಮ್ಯ ಅಪರಾಧ. ಹಲ್ಲೆ ನಡೆಸಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ಹರಿಹಾಯ್ದರು.
Key words: Corruption, state government, Union Minister, Pralhad Joshi