ಬೆಂಗಳೂರು,ಜನವರಿ,5,2023(www.justkannada.in): ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಅನ್ನು ವೈಮಾನಿಕ ಪರಿಶೀಲನೆ ನಡೆಸಿದರು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ವೇ ನಿರ್ಮಾಣ ಕಾರ್ಯದ ವೈಮಾನಿಕ ಪರಿಶೀಲನೆ ನಡೆಸಿದ್ದು ಕೇಂದ್ರ ಸಚಿವರಿಗೆ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಸಂಸದ ಮುನಿಸ್ವಾಮಿ ಸಾಥ್ ನೀಡಿದರು.
10 ಲೇನ್ನ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಪ್ರಯಾಣದ ಸಮಯ 7 ಗಂಟೆಗಳಿಂದ 3 ಗಂಟೆಗಳವರೆಗೆ ಕಡಿತಗೊಳಿಸುವ ಗುರಿಯನ್ನು ಹೊಂದಿದೆ. ಈ ಕುರಿತು ಟ್ವೀಟ್ ಮಾಡಿರುವ ನಿತಿನ್ ಗಡ್ಕರಿ, ನಾವು 16,730 ಕೋಟಿ ರೂ. ಮೌಲ್ಯದ ಈ 262 ಕಿಮೀ ಉದ್ದದ 8 ಲೇನ್ ಹೆದ್ದಾರಿಯನ್ನು ನಿರ್ಮಿಸುತ್ತಿದ್ದೇವೆ. ಇದನ್ನು ಗಂಟೆಗೆ 120 ಕಿಮೀ ವೇಗದಲ್ಲಿ ವಿನ್ಯಾಸಗೊಳಿಸಲಾಗಿದೆ. ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವಿನ ಅಂತರ 300 ಕಿಮೀ.ಯಿಂದ 262 ಕಿಮೀಗೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
Key words: Union -Transport -Minister -Nitin Gadkari – aerial inspection – Bangalore-Chennai -Expressway.