ಬೆಂಗಳೂರು,ಜೂನ್,30,2023(www.justkannada.in): 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನ ಮತ್ತೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ(ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ) ಆದೇಶ ಹೊರಡಿಸಿದ್ದಾರೆ, 30.05.2023ರ ಸರ್ಕಾರಿ ಆದೇಶದಲ್ಲಿ 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ 15.06.2023ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. 16.06.2023ರ ಸರ್ಕಾರಿ, ಅದೇಶದಲ್ಲಿ, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ದಿನಾಂಕ 30.06.2023ರವರೆಗೆ ವಿಸ್ತರಿಸಿ ಆದೇಶಿಸಲಾಗಿತ್ತು.
ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತ ವಿಸ್ತರಿಸುವುದು ಅವಶ್ಯವೆಂದು ಪರಿಗಣಿಸಿ ಸರ್ಕಾರವು 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ದಿನಾಂಕ 03.07.2023 ರವರೆಗೆ ವಿಸ್ತರಿಸಿ ಆದೇಶಿಸಿದೆ.
Key words: Universal –transfer- period – 2023-24 -extended -again.