ವಿ.ವಿಗಳಲ್ಲಿ ಇ-ಆಫೀಸ್ ಕಡ್ಡಾಯ: ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ ನಾರಾಯಣ್.

ಬೆಂಗಳೂರು,ಫೆಬ್ರವರಿ,25,2022(www.justkannada.in):  ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಅನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ತಮ್ಮ ಇಲಾಖೆಯ  ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, `ಇ-ಆಫೀಸ್’ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ ಸೂಚಿಸಿತ್ತು. ಆದರೂ ಕೆಲ ವಿ.ವಿ.ಗಳಲ್ಲಿ ಈ ಕೆಲಸ ಆಗಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಎಚ್ಚರಿಸಿದ್ದಾರೆ.

ತಮ್ಮ ಕಚೇರಿಯು ಈಗಾಗಲೇ ಸಂಪೂರ್ಣವಾಗಿ ಇ-ಆಫೀಸ್ ತಂತ್ರಾಂಶದ ಮೇಲೆಯೇ ಕೆಲಸ ಮಾಡುತ್ತಿದೆ. ಆದರೆ ಇಲಾಖೆಗೆ ವಿ.ವಿ.ಗಳಿಂದ ಎಲ್ಲ ಪತ್ರಗಳು, ಕಡತಗಳು ಮತ್ತು ಪ್ರಸ್ತಾವನೆಗಳು ಭೌತಿಕ ರೂಪದಲ್ಲಿ ಬರುತ್ತಿವೆ. ಇದರಿಂದಾಗಿ ಇ-ಆಫೀಸ್ ತಂತ್ರಾಂಶ ಅಳವಡಿಕೆಯ ಮೂಲೋದ್ದೇಶವೇ ವಿಫಲವಾದಂತಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿ.ವಿ.ಗಳ ಆಡಳಿತವೂ ಸೇರಿದಂತೆ ಪ್ರತಿಯೊಂದು ಕೆಲಸವೂ ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ಮಾಡಬೇಕೆನ್ನುವುದು ಇ-ಆಫೀಸ್ ತಂತ್ರಾಂಶದ ಗುರಿಯಾಗಿದೆ. ವಿ.ವಿ.ಗಳು ಸಮಕಾಲೀನ ಶೈಲಿಯನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗಲಿವೆ ಎಂದು ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.

ಜೊತೆಗೆ, ಎನ್ ಇಪಿ ಅನುಸಾರ ವಿ.ವಿ.ಗಳಲ್ಲಿ ನಡೆಯುತ್ತಿರುವ ಡಿಜಿಟಲೀಕರಣ, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಅಳವಡಿಕೆ, ರಾಷ್ಟ್ರೀಯ ಶೈಕ್ಷಣಿಕ ಕೋಶ (ಎನ್ಎಡಿ), ಇ-ಆಫೀಸ್ ಬಳಕೆಗೆ ವಿ.ವಿ.ಗಳಲ್ಲಿನ ಸಿಬ್ಬಂದಿಯನ್ನು ಹೇಗೆ ಸಿದ್ಧಗೊಳಿಸಲಾಗಿದೆ ಎನ್ನುವುದನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಿ, 15 ದಿನಗಳಲ್ಲಿ ತಮಗೆ ವರದಿ ನೀಡುವಂತೆಯೂ ಅವರು ಸೂಚಿಸಿದ್ದಾರೆ.

Key words: university- E-Office-Minister-Ashwath Narayan

ENGLISH SUMMARY…

E-Office mandatory in Universities

Higher Education Minister sets March 1 as the deadline

Bengaluru: It has been made mandatory for all the universities to submit files online only by using the ‘E-Office’ software platform. Stating this, Dr.C.N.Ashwatha Narayana, Minister for Higher Education, has instructed the officials of the department to send back the files which arrive in physical format after the said date.

In a letter written to ACS of the department regarding this, he has told, “Universities were instructed earlier to submit all the files through ‘E-Office’. But, it has come to my notice that some of the universities have still not implemented E-Office despite prior instruction to do so.”

He has said, though his office was functioning completely based on ‘E-Office’, letters, files, and proposals from Universities were still being sent in physical format. Expressing dissatisfaction over this, he has said this has defeated the very purpose of implementation of ‘E-Office’.

The objective of the ‘E-Office’ is to enable speedy delivery of services and to bring transparency in the system. Universities will become irrelevant if the universities do not adapt to the present-day work patterns, Narayana has added.

The Minister has also instructed to constitute a committee to get a report within 15 days on digitalization, Unified University & College Management System (UUCMS), National Academic Depository (NAD) which are being implemented as per New Education Policy (NEP-2020)