ಉತ್ತರ ಪ್ರದೇಶ,ಡಿ,20,2019(www.justkannada.in): ಇಡೀ ದೇಶವನ್ನೇ ಉನ್ನಾವೋ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಿತಾವಧಿ ಶಿಕ್ಷೆ ವಿಧಿಸಿ ದೆಹಲಿಯ ತೀಸ್ ಹಜಾರಿ ಕೋರ್ಟ್ ಆದೇಶ ಹೊರಡಿಸಿದೆ.
ಉನ್ನಾವೋ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅಪರಾಧಿ ಎಂದು ತೀಸ್ ಹಜಾರಿ ಕೋರ್ಟ್ ತೀರ್ಪು ಪ್ರಕಟಿಸಿತ್ತು. ಇದೀಗ ಇಂದು ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಿತಾವಧಿ ಶಿಕ್ಷೆ ಮತ್ತು 25 ಲಕ್ಷ ರೂ ದಂಡ ವಿಧಿಸಿದೆ.
ದಂಡದ ಪೈಕಿ 10 ಲಕ್ಷವನ್ನ ಪರಿಹಾರವಾಗಿ ಸಂತ್ರಸ್ತೆಗೆ ನೀಡುವಂತೆ ಕೋರ್ಟ್ ಸೂಚನೆ ನೀಡಿದೆ. 2017 ರಲ್ಲಿ ಉನ್ನಾವೋ ಬಾಲಕಿಯನ್ನ ಅಪಹರಿಸಿ ಅತ್ಯಾಚಾರವೆಸಗಲಾಗಿತ್ತು. ಪ್ರಕರಣದಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಸೇರಿ ನಾಲ್ವರ ಹೆಸರು ಕೇಳಿ ಬಂದಿತ್ತು. ಪ್ರಕರಣ ಸಂಬಂಧ 2018ರಲ್ಲಿ ಕುಲದೀಪ್ ಸಿಂಗೆ ಸೆಂಗಾರ್ ಬಂಧನವಾಗಿತ್ತು.
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2017ರಲ್ಲಿ ನಡೆದ ಉನ್ನಾವೋ ಬಾಲಕಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ ತೀಸ್ ಹಜಾರಿ ಕೋರ್ಟ್, ಕಳೆದ ಸೋಮವಾರ ಪ್ರ,ಮುಖ ಆರೋಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅಪರಾಧಿ ಎಂದು ತೀರ್ಪು ನೀಡಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು.
ಈ ನಡುವೆ ಉನ್ನಾವೋ ಸಂತ್ರಸ್ತೆಯ ಮೇಲೆ ದುಷ್ಕರ್ಮಿಗಳು ನಡು ರಸ್ತೆಯಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಇದರಿಂದಾಗಿ ಶೇ.90ರಷ್ಟು ಸುಟ್ಟು, ದೆಹಲಿಯ ಸಪ್ಜರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.
Key words: Unnao rape case-Kuldeep Singh Sengar -sentenced – life imprisonment