ಮೈಸೂರು,ಮೇ,2,2021(www.justkannad.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ತಡೆಗಟ್ಟಲು ರಾಜ್ಯ ಸರ್ಕಾರ ಜನತಾ ಕರ್ಫ್ಯೂ ಹೇರಿದ್ದು, ಈ ಮಧ್ಯೆ ಕರ್ಫ್ಯೂ ಅವಧಿಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳನ್ನ ಮೈಸೂರು ಪೊಲೀಸರು ಸೀಜ್ ಮಾಡಿದ್ದಾರೆ.
ಕೋವಿಡ್ ಕರ್ಫ್ಯೂ ಅವಧಿಯಲ್ಲಿ ಮೈಸೂರಿನಲ್ಲಿ ಸಾರ್ವಜನಿಕ ವಾಹನಗಳ ಅನಗತ್ಯ ಓಡಾಟ ಕಂಡು ಬಂದಿದ್ದು, ನಿನ್ನೆ ಒಂದೇ ದಿನ 473 ಗಾಡಿಗಳನ್ನ ಪೊಲೀಸರು ಸೀಜ್ ಮಾಡಿದ್ದಾರೆ. 403 ದ್ವಿಚಕ್ರ ವಾಹನ, 10 ಆಟೋ ರಿಕ್ಷಾ, 52 ಕಾರುಗಳು, ಇತರೇ 8 ವಾಹನಗಳು ಸೇರಿದಂತೆ ಒಟ್ಟು 473 ವಾಹನಗಳನ್ನು ಸೀಜ್ ಮಾಡಲಾಗಿದೆ.
ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯ ಉಲ್ಲಂಘನೆ ಸಂಬಂಧ 289 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ.
ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಆದೇಶ ಉಲ್ಲಂಘನೆ ಮಾಡಿದವರ ಮೇಲೆ ಒಟ್ಟು 49,750 ರೂ ದಂಡವನ್ನ ವಿಧಿಸಿದ್ದಾರೆ. ಲಾಕ್ ಡೌನ್ ಉಲ್ಲಂಘನೆ ಮಾಡಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳ ಮೇಲೂ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳದಲ್ಲಿ ಉಗುಳುತ್ತಾ ನಡೆಯುತ್ತಿದ್ದ ವ್ಯಕ್ತಿ ಮೇಲೂ ಕೇಸ್ ಹಾಕಲಾಗಿದ್ದು, ಉದಯಗಿರಿ, ಮೇಟಗಳ್ಳಿ ಜಯಲಕ್ಷ್ಮೀಪುರಂ, ಮಂಡಿ, ಹೆಬ್ಬಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳ ಮೇಲೆ ಪ್ರಕರಣ ದಾಖಲಾಗಿದೆ.
Key words: Unnecessary- travel –curfew-473 vehicles sieze- single day -Mysore.