ಬೆಂಗಳೂರು, ಮೇ 13, 2023 (www.justkannada.in): ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದ್ದು, ಕಾಂಗ್ರೆಸ್’ಗೆ ನನ್ನ ಬೆಂಬಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕನಿಷ್ಠಐದು ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ ಜೊತೆ ಕೈ ಜೋಡಿಸಲ್ಲ. ಅತಂತ್ರ ವಿಧಾನಸಭೆ ರಚನೆಯಾದರೆ ಕಾಂಗ್ರೆಸ್’ಗೆ ಬೆಂಬಲ ನೀಡುವೆ ಎಂದಿದ್ದಾರೆ.
ಗಂಗಾವತಿ ಕ್ಷೇತ್ರದಲ್ಲಿ ನಾನು, ಬಳ್ಳಾರಿ ನಗರದಲ್ಲಿ ನನ್ನ ಪತ್ನಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ನನ್ನ ಬೆಂಬಲವಿದೆ ಎಂದರು.
ಇತ್ತೀಚೆಗೆ ಸ್ಥಾಪನೆ ಮಾಡಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ರಾಜ್ಯದ 49 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.