ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ಪ್ರಧಾನಿ ನರೇಂದ್ರ ಮೋದಿ ಈ ವರ್ಷ ಅಯೋಧ್ಯೆಯಲ್ಲಿ 10 ದಿನಗಳ ದೀಪಾವಳಿ ಆಚರಣೆಯನ್ನು ಉದ್ಘಾಟನೆ ಮಾಡುವ ಸಾಧ್ಯತೆ ಇದೆ.
ನವೆಂಬರ್ 3ರಂದು ನಡೆಯಲಿರುವ ದೀಪೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಬಹುದು ಎನ್ನಲಾಗುತ್ತಿದೆ. ಈ ಹಿಂದೆ ವಿಜೃಂಭಣೆಯ ದೀಪೋತ್ಸವಕ್ಕೆ ಸಾಮಾನ್ಯವಾಗಿ ಸಿಎಂ ಯೋಗಿ ಆದಿತ್ಯನಾಥ್ ಚಾಲನೆ ನೀಡುತ್ತಿದ್ದರು.
ಈಗಾಗಲೇ ಅಯೋಧ್ಯಾ ಅಭಿವೃದ್ಧಿ ಇಲಾಖೆ ಸೂಕ್ತ ತಯಾರಿ ಆರಂಭಿಸಿದೆ. ಈ ಬಾರಿ 6.5 ಲಕ್ಷ ದೀಪಗಳನ್ನು ಬೆಳಗುವ ಮೂಲಕ ಗಿನ್ನೆಸ್ ದಾಖಲೆ ಮಾಡಲು ಪ್ಲಾನ್ ಮಾಡಲಾಗಿದೆ.
ಆದರೆ ಪ್ರಧಾನಿ ಮೋದಿ ಅಯೋಧ್ಯೆಗೆ ಭೇಟಿ ನೀಡುವ ಬಗ್ಗೆ ಯಾವುದೇ ಖಚಿತ ಮಾಹಿತಿ ನೀಡಿಲ್ಲ.
key words: UP Election Plan! Modi’s drive to Ayodhya deepotsava