ನವದೆಹಲಿ,ಫೆ,25,2020(www.justkannada.in): ಭಾರತ ಪ್ರವಾಸದಲ್ಲಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದರು.
ಡೊನಾಲ್ಡ್ ಟ್ರಂಪ್ ಅವರಿಗೆ ರಾಷ್ಟ್ರಪತಿ ರಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಂಪ್ರದಾಯಕ ಸ್ವಾಗತ ಕೋರಿದರು. ಡೊನಾಲ್ಡ್ ಟ್ರಂಪ್ ಅವರಿಗೆ ಭಾರತೀಯ ಸೇನೆ ಗೌರವ ವಂದನೆ ಸಲ್ಲಿಸಿತು. ಬಳಿಕ ಡೊನಾಲ್ಡ್ ಟ್ರಂಪ್ ರಾಷ್ಟ್ರಪತಿ ಭವನದಿಂದ ರಾಜ್ ಘಾಟ್ ನತ್ತ ಪ್ರಯಾಣ ಬೆಳೆಸಿದ್ದಾರೆ.
ಇಂದು ಭಾರತ ಮತ್ತು ಅಮೇರಿಕಾ ನಡುವೆ ದೊಡ್ಡ ಮಟ್ಟದ ಒಪ್ಪಂದಗಳು ಆಗುವ ಸಾಧ್ಯತೆ ಇಎ. ಈ ಬಗ್ಗೆ ನಿನ್ನೆ ಡೊನಾಲ್ಡ್ ಟ್ರಂಪ್ ಅವರೇ ಹೇಳಿದ್ದರು. ಇನ್ನು ಇಂದು ಡೊನಾಲ್ಡ್ ಟ್ರಂಪ್ ಅವರೊಂದಿಗೆ ಔತಣಕೂಟವನ್ನ ಏರ್ಪಡಿಸಲಾಗಿದೆ.
Key words: US president-Donald Trump –visit- President’s House.