ತಮ್ಮ ತಪ್ಪು ಮುಚ್ಚಿಕೊಳ್ಳಲು ಬಡವರ ಮೇಲೆ ಗದಾಪ್ರಹಾರ-ಬೆಲೆ ಏರಿಕೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿ

ತುಮಕೂರು,ಏಪ್ರಿಲ್,1,2025 (www.justkannada.in):  ಹಾಲು ಮೊಸರು, ಟೋಲ್ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ, ತಮ್ಮ ತಪ್ಪು ಮುಚ್ಚಿಕೊಳ್ಳಲು ಬಡವರ ಮೇಳೆ ಗದಾಪ್ರಹಾರ ಮಾಡುತ್ತಿದ್ದಾರೆ. ತುಂಬಾ ದಿನ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ನಡೆಯಲ್ಲ.  ಶೇ 5ರಷ್ಟು ಟೋಲ್ ಶುಲ್ಕವನ್ನು ಹೆಚ್ಚಳ ಮಾಡಿದ್ದಾರೆ. ಅನಾವಶ್ಯಕವಾಗಿ ತಳ್ಳಾಡಿಕೊಂಡು ಈ ಸರ್ಕಾರ ನಡೆಯುತ್ತಿದೆ ಎಂದು ಕಿಡಿಕಾರಿದರು.

ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ವಿ.ಸೋಮಣ್ಣ,  ಶ್ರೀಗಳು ಇದ್ದಾಗ ಮಠಕ್ಕೆ ಹಲವು ಬಾರಿ ಪ್ರಧಾನಿ ಮೋದಿ ಬಂದಿದ್ದರು. ಶಿವಕುಮಾರಸ್ವಾಮೀಜಿಗಳು  ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.  ಹೀಗಾಗಿ ಭಾರತ ರತ್ನ ನೀಡಬೇಕೆಂದು ಮೊದಲಿನಿಂದಲೂ ನಾನು ವಿನಂತಿಸುತ್ತಿದ್ದೇನೆ ಎಂದು ವಿ.ಸೋಮಣ್ಣ ತಿಳಿಸಿದರು.

Key words: Union Minister, V. Somanna, price, hikes, State Government