ಬೆಂಗಳೂರು,ಜುಲೈ,23,2021(www.justkannada.in): ತಜ್ಞರ ವರದಿ ಕೈ ಸೇರಿದ ನಂತರ ಚರ್ಚಿಸಿ ಶಾಲೆಗಳ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಡಾ.ಕೆ.ಸುಧಾಕರ್, ಆದ್ಯತೆ ಮೇರೆಗೆ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ಮಾರ್ಗಸೂಚಿ ಸಿದ್ದತೆ ಮಾಡಲಾಗಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶಾಲೆಗಳ ಮುಖ್ಯಸ್ಥರು ಕ್ರಮವಹಿಸಿ. ತಮ್ಮ ಸಂಸ್ಥೆಯಲ್ಲಿ 100% ಲಸಿಕೆ ಪಡೆದಿರುವಂತೆ ಸೂಚನೆ ನೀಡಿದರು.
ರಾಜ್ಯದಲ್ಲಿ ಹಂತಹಂತವಾಗಿ ಶಾಲೆ ಆರಂಭಕ್ಕೆ ಚಿಂತನೆ. ಶಾಲೆ ಆರಂಭ ಹಿನ್ನಲೆ ಶಿಕ್ಷಕರು ಹಾಗೂ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ ಎಂದರು.
Key words: Vaccines – all schools – teachers –staff-Minister -Sudhakar.