ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ- ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ, ಮಾರ್ಚ್ 23, 2021(www.justkannada.in): ರಾಜ್ಯದಲ್ಲಿ ಕೋವಿಡ್ ಲಸಿಕೆಗೆ ಯಾವುದೇ ಕೊರತೆಯಾಗುವುದಿಲ್ಲ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಕೊರತೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.jk

ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಹನ್ನೆರಡೂವರೆ ಲಕ್ಷ ಡೋಸ್ ಕೋವಿಡ್ ಲಸಿಕೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿದೆ. ಮುಂದಿನ ನ ವಾರದೊಳಗೆ ಬರಲಿದೆ. ಆದರೆ ಅದಕ್ಕೆ ಮುನ್ನ ಹೆಚ್ಚುವರಿಯಾಗಿ 4 ಲಕ್ಷ ಡೋಸ್ ಗಳನ್ನು ವಿಮಾನದಲ್ಲಿ ಕಳುಹಿಸಲಾಗುತ್ತಿದೆ. ಲಸಿಕೆಗೆ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ ಎಂದರು.

ಕೋವಿಡ್ ಎರಡನೇ ಅಲೆ ಇದೆ. ಅನೇಕ ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಾಗರಿಕರು ಕೂಡ ಕೋವಿಡ್ ಸುರಕ್ಷತಾ ಕ್ರಮ ಅನುಸರಿಸಬೇಕು ಎಂಬುದನ್ನು ಅರಿಯಬೇಕು. ಅನಗತ್ಯವಾಗಿ ಗುಂಪುಗೂಡುವುದು, ಮಾಸ್ಕ್ ಧರಿಸದಿರುವುದು ಮೊದಲಾದ ಕ್ರಮಗಳಿಗೆ ಈಗಾಗಲೇ ಕಡಿವಾಣ ಹಾಕಲಾಗಿದೆ. ಸಭೆ, ಸಮಾರಂಭಗಳನ್ನು 2 ತಿಂಗಳ ಮಟ್ಟಿಗೆ ಮುಂದೂಡಬೇಕು ಎಂದು ಕೋರಿದರು.

ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು. ಇದರಿಂದಾಗಿ ಹೆಚ್ಚಿನ ಜನರಿಗೆ ಲಸಿಕೆ ನೀಡಬಹುದು. ಎಲ್ಲರೂ ಕೂಡಲೇ ಕೋವಿಡ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಬೇಕು ಎಂದು ಸಚಿವ ಸುಧಾಕರ್  ಟ್ವೀಟ್ ನಲ್ಲಿ ಕೋರಿದ್ದಾರೆ.Vaccines to be open for all above 45 years

ಕಾನೂನು ಕ್ರಮ ಜಾರಿಯಾಗಲಿದೆ

ಅಮಾಯಕ ದಲಿತ ಯುವಕ ಸ್ವಂತ ದುಡಿಮೆಯಿಂದ ಆತ್ಮಗೌರವದಿಂದ ಸ್ವಾಭಿಮಾನದ ಬದುಕನ್ನು ಬದುಕುತ್ತಿದ್ದರು. ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾಗಿದ್ದ ಅವರನ್ನು ಹಿಂದಿನ ಯಾವುದೋ ವೈಷಮ್ಯದಿಂದ ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಅಂತಹ ಪಾಪಿಗಳ ವಿರುದ್ಧ ಕಾನೂನು ಕ್ರಮ ಜಾರಿಯಾಗಲಿದೆ. ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದು, ಇದರ ಹಿಂದೆ ಇರುವವವರ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲು ಹೇಳಲಾಗಿದೆ. ಇದಕ್ಕೆ ಕುಮ್ಮಕ್ಕು ನೀಡಿದವರನ್ನು ಕೂಡ ಬಿಡುವ ಪ್ರಶ್ನೆಯೇ ಇಲ್ಲ. 56 ವರ್ಷಗಳ ನಂತರ ನನ್ನ ಕ್ಷೇತ್ರದಲ್ಲಿ ಅಪರಾಧ ನಡೆದಿದೆ. ತಪ್ಪಿತಸ್ಥರಿಗೆ ಉಗ್ರವಾದ ಶಿಕ್ಷೆಯಾಗಲಿದೆ. ಈ ಘಟನೆಯಿಂದ ಬಹಳ ದುಃಖವಾಗಿದೆ ಎಂದರು.

ENGLISH SUMMARY…

Vaccines to be open for all above 45 years

No shortage of vaccine in state;next trance to be received soon: Health & Medical Education Minister Dr.K.Sudhakar

Chikkaballapur, March 23, Tuesday*

There is no shortage of vaccine in state. We have discussed this with centre and centre has assured that there will be no shortage of supply of vaccine, said Health and Medical Education Minister Dr.K.Sudhakar.

Speaking to media he said state will be receiving 12.5 lakh doses of vaccine from centre by next week. Before that additional 4 lakh doses will be dispatched through flight. Govt will ensure that there is no shortage of vaccine, said minister.

The second wave has begun in the state. Number of cases are increasing in several parts of the state. People should be vigilant and ensure that covid precautions are followed. People who are not wearing mask and violating norms are being penalised. Functions and gatherings should be avoided for next two months, he added.

Vaccine for all above 45 years

Starting from April 1st, vaccine will be available to all citizens above 45 years of age. This will ensure better coverage and will further expedite our efforts to make Karnataka Covid-19 free. I urge all eligible citizens to get vaccinated at the earliest, Minister tweeted.

Key words:Vaccines – open – all above- 45 years-minister sudhakar