ಬೆಂಗಳೂರು,ಅಕ್ಟೋಬರ್,14,2024 (www.juskannada.in): ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.
ವಾಲ್ಮೀಕಿ ಹಗರಣ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಜಾಮೀನು ಕೋರಿ 82ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ 82ನೇ ಸಿಸಿಹೆಚ್ ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಜಾಮೀನು ಅರ್ಜಿ ಬಗ್ಗೆ ಆದೇಶ ಪ್ರಕಟಿಸಲಿದೆ.
ಪ್ರಕರಣ ಸಂಬಂಧ ಮೂರು ತಿಂಗಳ ಹಿಂದೆ ನಾಗೇಂದ್ರ ಅವರನ್ನ ಇಡಿ ಬಂಧಿಸಿತ್ತು.
Key words: Valmiki Corporation, Former minister, B. Nagendra, bail