ಬೆಂಗಳೂರು,ಜುಲೈ,25,2024 (www.justkannada.in): ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣ ಸಂಬಂಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜಭವನಕ್ಕೆ ಪಾದಯಾತ್ರೆ ಮೂಲಕ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ದೂರು ನೀಡಿದ್ದಾರೆ.
ಮುಡಾ ಹಗರಣ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಬಿಗಿಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸಿದ ಹಿನ್ನೆಲೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪವನ್ನ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಯಿತು.
ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದರು. ಸ್ವತಃ ಸಿಎಂ ಸಿದ್ದರಾಮಯ್ಯ ಹಗರಣದಲ್ಲಿ ಸಿಲುಕಿದ್ದಾರೆ. ಚರ್ಚೆಗೆ ಬಾರದೆ ಸಿಎಂ ಸಿದ್ದರಾಮಯ್ಯ ಪಲಾಯನ. ದಲಿತರ ಹಣ ಜಮೀನು ಲೂಟಿ ಹೊಡೆದಿದ್ದಾರೆ ಎಂದು ಕಿಡಿಕಾರಿದರು.
Key words: Valmiki, Muda scandal, complaint, bjp, Governor