ಮೈಸೂರು,ಜು,9,2019(www.justkannada.in): ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಸಾಮೂಹಿಕ ರಜೆ ಹಾಕಿ ಬೀದಿಗಿಳಿದಿದ್ದಾರೆ.
ಸರ್ಕಾರದ ನೀತಿ ವಿರುದ್ಧ ಪ್ರತಿಭಟನೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಸಿದ್ದಾರೆ. ನಗರದ ಪ್ರಮುಖ ರಸ್ತೆಯಲ್ಲಿ ಜಾಥ ನಡೆಸಿ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಆಗ್ರಹಿಸಿದ್ದಾರೆ.
ವೃಂದ ಮತ್ತು ನೇಮಕಾತಿ, (ಸಿ ಆರ್) ನಿಯಮಗಳಲ್ಲಿರುವ ತಿದ್ದುಪಡಿ ಮಾಡಬೇಕು. ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು. ಹೊಸ ಪಿಂಚಿಣಿ ಯೋಜನೆಯನ್ನ ರದ್ದುಗೊಳಿಸಬೇಕು. ಹಳೆ ಪಿಂಚಿಣಿ ಯೋಜನೆಯನ್ನೇ ಜಾರಿಗೊಳಿಸಬೇಕು. ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ತಕ್ಷಣ ಆರಂಭಿಸಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆಗ ಬಗಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
Key words: Various -demands -Protests -eachers -mass leave