ಸರ್ಕಾರಿ ಬಸ್ ಚಾಲಕ, ನಿರ್ವಾಹಕರ ಭೇಟಿ: ಬಂದ್ ಗೆ ಬೆಂಬಲಿಸುವಂತೆ ವಾಟಾಳ್ ನಾಗರಾಜ್ ಮನವಿ

ಮೈಸೂರು,ಮಾರ್ಚ್,19,2025 (www.justkannada.in): ಕನ್ನಡಿಗ ಕಂಡಕ್ಟ‌ರ್ ಮೇಲೆ ಮರಾಠಿಗರ ದಾಳಿಗೆ ಖಂಡನೆ,  ಪ್ರಕರಣ ಸಮಗ್ರ ತನಿಖೆ ಮತ್ತು ರಾಜ್ಯದಲ್ಲಿ ಎಂಇಎಸ್ ನಿಷೇಧ ಮಾಡುವಂತೆ ಆಗ್ರಹಿಸಿ ಮಾರ್ಚ್ 22 ರಂದು ಕರೆ ನೀಡಲಾಗಿರುವ ಬಂದ್ ಯಶಸ್ವಿ ಮಾಡೇ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದರು.

ಮಾರ್ಚ್ 22 ರಂದು ಕರ್ನಾಟಕ ಬಂದ್ ಹಿನ್ನಲೆ, ಮೈಸೂರಿನಲ್ಲಿ ಕೆಎಸ್ಆರ್ ಟಿಸಿ ಬಸ್ ಚಾಲಕರು, ನಿರ್ವಾಹಕರನ್ನ ಭೇಟಿ ಮಾಡಿದ ವಾಟಾಳ್ ನಾಗರಾಜ್. ಬಂದ್ ಗೆ ಬೆಂಬಲ ಕೊಡುವಂತೆ ಮನವಿ ಮಾಡಿದರು.  ನಿಮ್ಮ ಜೊತೆ ನಾವಿದ್ದೇವೆ ಹೋರಾಟದಲ್ಲಿ ಭಾಗಿಯಾಗಿ ಎಂದು ಆತ್ಮಸ್ಥೈರ್ಯ ತುಂಬಿದರು.

ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22ಕ್ಕೆ ಕರ್ನಾಟಕ ಬಂದ್ ಯಶಸ್ವಿ ಮಾಡೇ ಮಾಡುತ್ತೇವೆ. ಈಗಾಗಲೇ ಬಹುತೇಕ ಸಂಘಟನೆಗಳು ಬೆಂಬಲ ಕೊಟ್ಟಿವೆ. ಮರಾಠಿಗರ ಪುಂಡಾಟಿಕೆ, ಮರಾಠಿಗರ ಅಟ್ಟಹಾಸ, ಎಂ.ಇ.ಎಸ್ ನಿಷೇದ ಮಾಡಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನೆ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟ‌ರ್ ಮೇಲೆ ಮರಾಠಿಗರ ದಾಳಿ ಬಗ್ಗೆ ಸಮಗ್ರವಾಗಿ ತನಿಖೆ ಆಗಬೇಕು, ಮೇಕೆದಾಟು ಬಗ್ಗೆ ತಮಿಳುನಾಡು ವಿರೋಧ ಮಾಡುತ್ತಿದ್ದು ಎಲ್ಲಾ ವಿಚಾರವಾಗಿ ಮಾರ್ಚ್ 22 ರಂದು ಕರ್ನಾಟಕ ಬಂದ್ ನಡೆಯಲಿದೆ ಅಂದು ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 6-00 ಗಂಟೆವರೆಗೆ ಬಂದ್ ಮಾಡಲಾಗುವುದು. ಕನ್ನಡಿಗರು ಈ ಬಂದ್ ಗೆ ಕೈಜೋಡಿಸಬೇಕು. ಸಮಗ್ರ ಕನ್ನಡಿಗರಿಗಾಗಿ, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಕರ್ನಾಟಕ ಬಂದ್ ಮಾಡಲಾಗುತ್ತದೆ.  ಬೆಳಗಾವಿಯಿಂದ ಚಾಮರಾಜನಗರವರೆಗೆ ಬಂದ್ ಇರಲಿದೆ ಎಂದರು.

ಬೆಳಗಾವಿ ಕನ್ನಡಿಗರ ಕೈಯಲ್ಲಿ ಇಲ್ಲ ಮರಾಠಿಗರ ಕೈಯಲ್ಲಿ ಇದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬೇಕಾಗಿಲ್ಲ ಎಂದು ಸರ್ಕಾರ ಒತ್ತಾಯ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಎಂಇಎಸ್ ಇರಬಾರದು. ಬೆಳಗಾವಿ ಉಳಿಸಬೇಕು. ಕನ್ನಡದ ಭೂಮಿಯಲ್ಲಿ ನಮ್ಮ ಕನ್ನಡದ ಚಾಲಕರಿಗೆ ಹೊಡೆದಿದ್ದಾರೆ. ಹೀಗಾಗಿ ಚಾಲಕರು ಈ ಬಂದ್ ನಲ್ಲಿ ವಾಹನಗಳನ್ನು ಚಾಲನೆ ಮಾಡಬಾರದು, ರಾಜ್ಯಪಾಲರಿಗಾಗಲಿ,  ಮುಖ್ಯಮಂತ್ರಿಗಾಗಲಿ ಚಾಲಕರು ಕಾರಿನಲ್ಲಿ ಕುಳಿತುಕೊಳ್ಳಬಾರದು.  ಕನ್ನಡಪರ ಸಂಘಟನೆಗಳಲ್ಲಿ ಮನವಿಯನ್ನು ಮಾಡಿದ್ದೇನೆ.‌ ಮತ್ತೊಮ್ಮೆ ಕರೆಯುತ್ತೇನೆ ಎಂದು ತಿಳಿಸಿದರು.

ಚಿತ್ರರಂಗ ಸಂಪೂರ್ಣ ಬಂದ್ ಆಗುತ್ತದೆ ಎಂದು ನಂಬಿದ್ದೇನೆ. ನಟ ನಟಿಯರಲ್ಲಿ ಮನವಿ ಮಾಡುತ್ತೇನೆ. ಪರ ಭಾಷೆಚಿತ್ರಗಳನ್ನು ಬಹಿಷ್ಕಾರ ಹಾಕಬೇಕಿದೆ. ಕನ್ನಡ ಸಾಹಿತ್ಯ ಪರಿಷತ್ತು ಮಲಗಿದೆ, ವರ್ಷದಲ್ಲಿ ಮೂರು ದಿನ ಒಬ್ಬಟ್ಟು ಊಟ ಮಾಡಿ ಮಲಗುತ್ತಾರೆ.  ಬಂದ್ ಗೆ ಸಾಹಿತಿಗಳು ಬೆಂಬಲ ಕೊಡಬೇಕು ಎಂದು ವಾಟಾಳ್ ನಾಗರಾಜು ಹೇಳಿದರು.

Key words: bandh, drivers, Conductor, Vatal Nagaraj, support