ಮಂಡ್ಯ,ಏಪ್ರಿಲ್,29,2025 (www.justkannada.in): ಮಂಡ್ಯ ಜಿಲ್ಲೆಯ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ನಾಲೆಯಲ್ಲಿ ಉರುಳಿದ್ದ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಗ್ರಾಮದ ಸಮೀಪ ವಿಶ್ವೇಶ್ವರಯ್ಯ ನಾಲೆಯಲ್ಲಿ ಕಾರು ಬಿದ್ದಿದ್ದು ಕಾರಿನಲ್ಲಿ ತಂದೆ ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ.
ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕು ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಅವರ ಮಕ್ಕಳಾದ ಅದ್ವೈತ್ (8) ಮತ್ತು ಅಕ್ಷತಾ (3) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕುಮಾರಸ್ವಾಮಿ ಏಪ್ರಿಲ್ 16ರಂದು ಮಕ್ಕಳ ಜತೆ ತಮ್ಮ ಕಾರಿನಲ್ಲಿ ಬೆಂಗಳೂರಿನಿಂದ ಕೆ. ಆರ್. ನಗರಕ್ಕೆ ತೆರಳುತ್ತಿದ್ದರು. ಬಳಿಕ ಅವರ ಸುಳಿವು ಸಿಕ್ಕಿರಲಿಲ್ಲ. ನಂತರ ಏಪ್ರಿಲ್ 19ರಂದು ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಇದೀಗ ವಿಸಿ ನಾಲೆಯಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಕಾರು ಮತ್ತು ಮೃತದೇಹಗಳನ್ನು ನಾಲೆಯಿಂದ ಮೇಲೆ ಎತ್ತಲಾಗಿದೆ. ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Mandya, Father, two sons, dead, car, VC canal