ವಿಸಿ ನಾಲೆ ದುರಂತ: ನಾಪತ್ತೆಯಾಗಿದ್ದ ಮತ್ತೊಬ್ಬ ವ್ಯಕ್ತಿ ಶವವಾಗಿ ಪತ್ತೆ

ಮಂಡ್ಯ,ಫೆಬ್ರವರಿ,4,2025 (www.justkannada.in): ನಿನ್ನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ 3ನೇ ಶವ ಪತ್ತೆಯಾಗಿದೆ.

ಹಾಲಹಳ್ಳಿ ಸ್ಲಂ ನಿವಾಸಿ ಪೀರ್ ಖಾನ್ ಶವವಾಗಿ ಪತ್ತೆಯಾಗಿದ್ದು ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ನಿನ್ನೆ ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ಓರ್ವ ಸಾವನ್ನಪ್ಪಿ ಓರ್ವನನ್ನ ರಕ್ಷಿಸಲಾಗಿತ್ತು. ಇಬ್ಬರು ನಾಪತ್ತೆಯಾಗಿದ್ದರು. ಹಾಗೆಯೇ ನಿನ್ನೆಯೇ ಮತ್ತೊಬ್ಬರು ಅಸ್ಲಾಂ ಪಾಷ ಶವವಾಗಿ ಪತ್ತೆಯಾಗಿದ್ದರು.

ಇದೀಗ , ಫೀರ್‌ಖಾನ್ ಶವವಾಗಿ ಪತ್ತೆಯಾಗಿದ್ದಾರೆ. ಇನ್ನು ನೀರಿನಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ನಯಾಜ್ ಎಂಬಾತನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು

ಪಾಂಡವಪುರಕ್ಕೆ ತೆರಳಿದ್ದ ನಾಲ್ವರು ಕಾರಿನಲ್ಲಿ ಮಂಡ್ಯ ಕಡೆಗೆ ವಾಪಸಾಗುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ನಾಲೆಗೆ ಉರುಳಿದೆ. ನಾಲೆ ಪಕ್ಕ ತಡೆಗೋಡೆ ಇಲ್ಲದಿದ್ದರಿಂದ ಕಾರು ನಾಲೆಯೊಳಗೆ ಉರುಳಿದೆ.. ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಆ ಸಮಯದಲ್ಲಿ ಸಾವು-ಬದುಕಿನ ನಡುವೆ ಸೆಣಸಾಡುತ್ತಿದ್ದ ನಯಾಜ್‌ನನ್ನು ನೀರಿನಿಂದ ಹೊರತಂದು ಪ್ರಾಣ ರಕ್ಷಿಸಿದ್ದಾರೆ. ನಂತರದಲ್ಲಿ ಕಾರು ನೀರಿನೊಳಗೆ ಮುಳುಗಿದ್ದರಿಂದ ಮೂವರು ಬದುಕುಳಿಯಲಿಲ್ಲ.

Key words: VC Canal, car, overturn, found, deadbody