ಬೆಂಗಳೂರು, ಮೇ 15, 2022 (www.justkannada.in): ಪ್ರಥಮ ಪಿಯುಸಿಗೆ ದಾಖಲಾಗುವ ಮುನ್ನ ಕೆಲವೊಂದು ಎಚ್ಚರಿಕೆಗಳನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ತೆಗೆದುಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸಲಹೆ ನೀಡಿದೆ.
2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳ್ಳಬೇಕು.
ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.karnataka.gov.in ವೆಬ್ಸೈಟ್ನಲ್ಲಿ ಸೂಚಿಸಿರುವ ಕಾಲೇಜುಗಳಿಗೆ ಮಾತ್ರ ದಾಖಲಾತಿ ಪಡೆದುಕೊಳ್ಳಬೇಕು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಾಲೇಜು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಪ್ರವೇಶ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ: 0836-2740277 ಸಂಪರ್ಕಿಸಬಹುದು ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.