ಹಿರಿಯ ರಾಜಕಾರಣಿ ಕೆ.ಹೆಚ್.ಶ್ರೀನಿವಾಸ್ ನಿಧನ

ಬೆಂಗಳೂರು, ಆಗಸ್ಟ್,30,2024 (www.justkannada.in):  ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ, ಕೆ.ಹೆಚ್.ಶ್ರೀನಿವಾಸ್ (85) ಅವರು ಶುಕ್ರವಾರ ಬೆಳಗ್ಗೆ ಸುಮಾರು 11 ಗಂಟೆಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

1939ರಲ್ಲಿ ಜನಿಸಿದ ಕೆ.ಎಚ್. ಶ್ರೀನಿವಾಸ್ ಅವರು ಮೂಲತಃ ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರು.  ಶ್ರೀನಿವಾಸ್‌ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾದರು.

ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು.

ಡಿ ದೇವರಾಜ ಅರಸು ಸರ್ಕಾರದಲ್ಲಿ ಸಚಿವರಾಗಿ ಇಂಧನ, ವಾರ್ತಾ, ಯುವಜನ ಸೇವೆ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯೋಜನಾ ಖಾತೆಗಳನ್ನು ನಿರ್ವಹಿಸಿದ್ದ ಕೆ.ಎಚ್. ಶ್ರೀನಿವಾಸ್ ಅವರು ಮೂರು ಬಾರಿ ಶಾಸಕರಾಗಿ ಗೆದ್ದು, ಒಂದು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿದ್ದರು.

ಶ್ರೀನಿವಾಸ್‌ ಗೆ ಇಬ್ಬರು ಪುತ್ರಿಯರು. ಈ ಪೈಕಿ ಒರ್ವ ಪುತ್ರಿ ʼಹೂವು-ಹಣ್ಣುʼ ಸಿನಿಮಾದಲ್ಲಿ ನಾಯಕಿ ನಟಿಸಿದ್ದರೆ, ಮತ್ತೊರ್ವ ಪುತ್ರಿ ಆಂಗ್ಲ ಪತ್ರಿಕೆ ಪತ್ರಕರ್ತೆಯಾಗಿ ಗುರುತಿಸಿಕೊಂಡಿದ್ದರು.

Key words: Veteran politician, KH Srinivas,  passes away