ರಾಜ್ಯದ ಏಳು ನೂತನ ವಿ.ವಿ.ಗಳಿಗೆ ಕುಲಪತಿಗಳನ್ನು ನೇಮಿಸಿ ರಾಜ್ಯ‌ ಸರಕಾರದ ಆದೇಶ

ಬೆಂಗಳೂರು, ಮಾರ್ಚ್ 20, 2023 (www.justkannada.in): ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಇದರಂತೆ ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿ.ವಿ.ದ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್‍‌ ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ.ಎಸ್‌.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್‌ ಶರದ್‌ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ, ಕುವೆಂಪು ವಿ.ವಿ.ದ ಡಾ.ಬಿ ಎಸ್‌ ಬಿರಾದಾರ್‍‌ ಅವರನ್ನು ಬೀದರ್‍‌ ವಿವಿ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಡಾ.ಸುರೇಶ್‌ ಎಚ್‌ ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿ.ವಿ.ದ ನಿವೃತ್ತ ಪ್ರೊಫೆಸರ್‍‌ ಆಗಿರುವ ಡಾ.ಟಿ ಸಿ ತಾರಾನಾಥ್‌ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸರಕಾರವು ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ತತ್ತ್ವದಡಿಯಲ್ಲಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

English Summary: Vice-Chancellors appointed for 7 new Universities

Bengaluru: The State Government on Monday issued the orders appointing Vice-Chancellors for the newly established Universities of Chamarajanagara, Bidar, Haveri, Hasana, Kodagu, Koppala and Bagalakote.

Dr C N Ashwath Narayan, Minister for
Higher Education has stated that the orders have been issued on Monday.

Accordingly, Dr B.K. Ravi of the Communication department of Bangalore University has been appointed for Koppala University, Dr Ashok Sangappa Alur of Horticulture University, Bagalkote for Kodagu University, Dr M.R. Gangadhar of the Department of Anthropology, University of Mysore, for Chamarajanagara University, Dr Anand Sharad Deshpande of K.S. Gogate Engineering College, Belagavi for Bagalkote University, Dr B.S. Biradar of Kuvempu University for Bidar University, Dr Suresh H. Jangamashetty of Department of Electrical and Electronics, Basaveshwara Engineering College, Bagalkote for Haveri University, and Dr T.C. Taranath, a retired professor of Karnataka University, Dharwad, has been appointed for Hasana University,