ನಾಳೆಯಿಂದ ಆರಂಭಗೊಳ್ಳಲಿರುವ ಮೂರು ದಿನಗಳ 24ನೇ ತಂತ್ರಜ್ಞಾನ ಶೃಂಗಕ್ಕೆ ಬೆಂಗಳೂರು ಸಜ್ಜು, ಉಪರಾಷ್ಟ್ರಪತಿಯಿಂದ ಉದ್ಘಾಟನೆ.

Vice-President Venkaiah Naidu - inaugurate- Bengaluru Tech Summit 2021

 

ಬೆಂಗಳೂರು, ನ.16, 2021 : (www.justkannada.in news ) ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತವಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗದ (ಬಿಟಿಎಸ್) 24ನೇ ವರ್ಷದ ಸಮಾವೇಶವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಬುಧವಾರ ಉದ್ಘಾಟಿಸಲಿದ್ದಾರೆ.

ಮೂರು ದಿನಗಳ ಈ ಶೃಂಗವು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ನಡೆಯಲಿದೆ ಎಂದು ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಬಿಟಿಎಸ್-2021ಕ್ಕೆ ಆಗಿರುವ ಸಿದ್ಧತೆಗಳನ್ನು ಮಂಗಳವಾರ ವೀಕ್ಷಿಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಶೃಂಗದಲ್ಲಿ 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಯುಎಇ, ಐರೋಪ್ಯ ಒಕ್ಕೂಟ, ವಿಯಟ್ನಾಂ ಮತ್ತು ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನಟ್ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಸೇರಿದಂತೆ ಹಲವು ಗಣ್ಯರು ಶೃಂಗವನ್ನು ಉದ್ದೇಶಿಸಿ ವರ್ಚುಯಲ್ ರೂಪದಲ್ಲಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಈ ಶೃಂಗದಲ್ಲಿ ಜಾಗತಿಕ ಮಟ್ಟದ 300ಕ್ಕೂ ಹೆಚ್ಚು ಕಂಪನಿಗಳು ಮತ್ತು 5 ಸಾವಿರಕ್ಕೂ ಹೆಚ್ಚು ನವೋದ್ಯಮಗಳು ಸಕ್ರಿಯವಾಗಿ ಭಾಗವಹಿಸಲಿವೆ. ಜತೆಗೆ ವಾಣಿಜ್ಯ ವಲಯದ 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಹಾಜರಾಗುತ್ತಿದ್ದು, ವರ್ಚುಯಲ್ ರೂಪದಲ್ಲಿ 5 ಲಕ್ಷಕ್ಕೂ ಹೆಚ್ಚು ಆಸಕ್ತರು ವೀಕ್ಷಿಸಲಿದ್ದಾರೆ ಎಂದರು.

ಇದೇ ಮೊದಲ ಬಾರಿಗೆ ಶೃಂಗದಲ್ಲಿ ಭಾರತೀಯ ನಾವೀನ್ಯತಾ ಮೈತ್ರಿಕೂಟ (ಜಿಐಎ) ಉಪಕ್ರಮವನ್ನು ಅಳವಡಿಸಿಕೊಳ್ಳಲಾಗಿದೆ. ಇದರ ಜತೆಗೆ ಜಾಗತಿಕ ನಾವೀನ್ಯತಾ ಮೈತ್ರಿಕೂಟ (ಜಿಐಎ)ದ ಅಂಗವಾಗಿ ಜರ್ಮನಿ, ಜಪಾನ್, ಫಿನ್ಲೆಂಡ್, ಲಿಥುವೇನಿಯಾ, ಸ್ವೀಡನ್, ಸ್ವಿಟ್ಜರ್ಲೆಂಡ್ ಮುಂತಾದ ದೇಶಗಳೊಂದಿಗೆ ಒಡಂಬಡಿಕೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

`ಡ್ರೈವಿಂಗ್ ದಿ ನೆಕ್ಸ್ಟ್’ ಘೋಷವಾಕ್ಯದಡಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಪ್ರಧಾನವಾಗಿ ಐಟಿ, ಬಿಟಿ, ಕೃಷಿ, ಆರೋಗ್ಯ, ಲಸಿಕೆ, ಸೈಬರ್ ಸೆಕ್ಯುರಿಟಿ, ವೈದ್ಯಕೀಯ ಮತ್ತು ಆರ್ಥಿಕ ತಂತ್ರಜ್ಞಾನಗಳಿಗೆ ಒತ್ತು ಕೊಡಲಾಗುತ್ತಿದೆ. ಈ ಮೂಲಕ ಡಿಜಿಟಲೀಕರಣ, ಹೈಬ್ರಿಡ್ ಮಲ್ಟಿ ಕ್ಲೌಡ್, ಸೆಲ್ ಥೆರಪಿ ಮತ್ತು ಜೀನ್ ಎಡಿಟಿಂಗ್ ಕ್ಷೇತ್ರಗಳಲ್ಲಿ ರಾಜ್ಯವು ಹೊಸ ಛಾಪು ಮೂಡಿಸಲಿದ್ದು, ರೈತ ಸಮುದಾಯ ಮತ್ತು ಮಹಿಳಾ ಉದ್ಯಮಿಗಳ ಸಬಲೀಕರಣಕ್ಕೆ ಹೆಜ್ಜೆ ಇಡಲಾಗುವುದು ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಉಪಸ್ಥಿತರಿದ್ದರು.

KEY WORDS : Vice-President Venkaiah Naidu – inaugurate- Bengaluru Tech Summit 2021

 

ENGLISH SUMMARY :

Bengaluru: Vice-President Venkaiah Naidu will inaugurate Bengaluru Tech Summit 2021, Karnataka’s as well as India’s flagship annual 3 days long (Nov 17-19) technology event, on Wednesday.

Mr. Naftali Bennett, Prime Minister of Israel (virtual) and Mr. Scott Morrison, Prime Minister of Australia (virtual), Thaawarchand Gehlot, GoK, Ashwini Vaishnaw, Minister of Railways, Communications and Electronics & IT, GoI will be guests of honor, and Basavaraj Bommai, Chief Minister of the state will preside over.

Dr. C.N.Ashwatha Narayana, who was at the scheduled event venue (Taj West End, Race Course Road) on Tuesday to inspect the preparations being done, speaking to media said, the 24th edition of the event which is being conducted in hybrid format will witness participation of over 30 countries.

“For the first time South Africa, Vietnam, and UAE will be participating in the BTS. It is also for the first time mutual participation of Karnataka and Australia through BTS and Sydney Dialogue is being arranged. As part of this, The Sydney Dialogue sessions which also will be on the same days (Nov 17-19) wherein Prime Minister Narendra Modi will be addressing virtually on Nov 18 is going to be streamed on the BTS platform and likewise streaming of BTS on The Sydney Dialogue will provide an opportunity to show content from our participants”, Narayana explained. He further said, ‘India Innovative Alliance’ and India US Tech Conclave initiatives have been introduced for the first time.