ಬೆಂಗಳೂರು,ಅಕ್ಟೋಬರ್,10,2020(www.justkannada.in): ಕೊರೋನಾದಿಂದ ಶಿಕ್ಷಕರು ಸಾವನ್ನಪ್ಪಿ ಹಲವು ಮಕ್ಕಳು ಕೊರೋನಾಗೆ ತುತ್ತಾದ ಹಿನ್ನೆಲೆ ವಿದ್ಯಾಗಮ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ವಿದ್ಯಾಗಮ ಯೋಜನೆಯನ್ನ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇನ್ನು ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಿರುವುದಕ್ಕೆ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಮೂಲಕ ಸ್ಪಂದಿಸಿದ ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ. ಹಾಗೆಯೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.
ಇನ್ನು ಶಿಕ್ಷಕರು ಆತಂಕಕ್ಕೆ ಒಳಗಾಗಬಾರದು. ವಿದ್ಯಾಗಮ ಯೋಜನೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿದ್ಯಾಗಮ ಯೋಜನೆಯಿಂದಾಗಿ ಹಲವು ಶಿಕ್ಷಕರು ಕೊರೋನಾಗೆ ತುತ್ತಾಗಿದ್ದರು. ಈ ಹಿನ್ನೆಲೆ ವಿದ್ಯಾಗಮ ಯೋಜನೆ ಸ್ಥಗಿತಕ್ಕೆ ಆಗ್ರಹ ಕೇಳಿ ಬಂದಿತ್ತು. ಅಲ್ಲದೆ ಸೋಮವಾರದೊಳಗೆ ಯೋಜನೆ ನಿಲ್ಲಿಸದಿದ್ದರೇ ಅಹೋರಾತ್ರಿ ಧರಣಿ ನಡೆಸುವುದಾಗಿ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದರು.
Key words: vidyagama- Temporary -breakdown-Former CM -HD Kumaraswamy- thanked -government.