ವಿಜಯಪುರ, ಜುಲೈ 26, 2020 (www.justkannada.in): ವಿಜಯಪುರ ವಿಮಾನ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.
ವಿಜಯಪುರ ವಿಮಾನನಿಲ್ದಾಣದ ಸ್ಥಳಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಪರಂಪರೆ ತಾಣ, ಶೈಕ್ಷಣಿಕ, ತೋಟಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶೇಷ ಛಾಪನ್ನು ಹೊಂದಿರುವ ಈ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿಸುವುದು ಬಿ.ಎಸ್. ಯಡಿಯೂರಪ್ಪ ಹಾಗೂ ನಮ್ಮೆಲ್ಲರ ಆಶಯವಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದರು.
ಗಾಗಲೇ ಮಣ್ಣು ಪರೀಕ್ಷೆ ಸೇರಿದಂತೆ ಪೂರಕ ಕ್ರಮಕೈಗೊಳ್ಳಲಾಗಿದೆ. ಈ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಈ ವಿಮಾನ ನಿಲ್ದಾಣವನ್ನು ಉಡಾನ್ ಯೋಜನೆಯ ವ್ಯಾಪ್ತಿಗೊಳಡಿಸಲು ಶ್ರಮಿಸಲಾಗುತ್ತಿದೆ. ವಿಮಾನ ನಿಲ್ದಾಣವು ಈ ಪ್ರದೇಶದ ಅಭಿವೃದ್ದಿಗೆ ನಾಂದಿಯಾಗಲಿದೆ ಎಂದು ತಿಳಿಸಿದರು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.