ವಿಜಯಪುರ/ಬಾಗಲಕೋಟೆ,ಜುಲೈ,9,2022(www.justkannada.in): ವಿಜಯಪುರ, ಬಾಗಲಕೋಟೆ ಬೆಳಗಾವಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೊಳಗಾಗಿರುವ ಘಟನೆ ನಡೆದಿದೆ.
ಇಂದು ಬೆಳಿಗ್ಗೆ 6:21ರ ಸಮಯದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ, ಮಲಗಿದ್ದ ಜನರು ಭೀತಿಯಿಂದ ಓಡಿ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಗ್ರಾಮೀಣಭಾಗದಲ್ಲಿ ಹೆಚ್ಚು ಭೂ ಕಂಪನದ ಅನುಭವ ಹೆಚ್ಚಾಗಿದ್ದು, ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲಾಗಿದೆ. ಬಸವನಬಾಗೇವಾಡಿ ಭಾಗದಲ್ಲಿ ಭೂಕಂಪನ ಕೇಂದ್ರೀಕೃತವಾಗಿತ್ತು ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಪ್ರಾಥಮಿಕ ವರದಿ ನೀಡಲಾಗಿದೆ. ವಿಯಜಪುರ, ಬಸವನ ಬಾಗೇವಾಡಿ , ಬಬಲೇಶ್ವರ, ಸೊಲ್ಲಾಪುರ, ಜಮಖಂಡಿ ಭಾಗಗಳಲ್ಲಿ ಭೂಕಂಪನದ ತೀವ್ರತೆ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲೂ ಭೂಕಂಪನ ಅನುಭವವಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ 6.45 ರ ವೇಳೆಗೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಹಾಗೆಯೇ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಜಮಖಂಡಿ ನಗರದ ಹುಡ್ಕೊ ಕಾಲನಿಯಲ್ಲೂ 6.21 ನಿಮಿಷದಲ್ಲಿ ಭೂಮಿ ಕಂಪಿಸಿದೆ ಎನ್ನಲಾಗಿದೆ. ತೆರದಾಳದಲ್ಲೂ ಭೂಕಂಪನದ ಅನುಭವವಾಗಿದೆ. ಬೆಳಿಗ್ಗೆ 6.30ರ ವೇಳೆಗೆ ಭೂಮಿ ಕಂಪಿಸಿದೆ ಎನ್ನಲಾಗಿದೆ.
Key words: Vijayapura-Bagalkot- Earthquake – Belgaum