ಮೈಸೂರಿನಲ್ಲಿ ಕಲ್ಲು ತೂರಾಟ, ಹಿಂಸಾಚಾರ:  ಉದಯಗಿರಿ ಠಾಣೆಗೆ ಪೊಲೀಸ್ ಸರ್ಪಗಾಲು

ಮೈಸೂರು,ಫೆಬ್ರವರಿ,11,2025 (www.justkannada.in): ಮುಸ್ಲಿಂ ಧರ್ಮಗುರು ಕುರಿತು ಅವಹೇಳನಕಾರಿ ಪೋಸ್ಟ್ ವಿವಾದಕ್ಕೆ ಸಂಬಂಧಿಸಿದಂತೆ  ನಿನ್ನೆ ರಾತ್ರಿ ಸಮುದಾಯವೊಂದರ ಪ್ರತಿಭಟನಾಕಾರರು ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಈ ವೇಳೆ 14ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ.

ಗಲಾಟೆಯಲ್ಲಿ ಇನ್ಸ್ ಪೆಕ್ಟರ್ ಸೇರಿ 14 ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿದೆ . ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೋರ್ವ ಹಾಕಿದ ಒಂದು ಪೋಸ್ಟ್ ಭಾರಿ ಹಿಂಸಾಚಾರಕ್ಕೆ ಕಾರಣವಾಗಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ವೈರಲ್ ಆಗುತ್ತಿದ್ದಂತೆ ರೊಚ್ಚಿಗೆದ್ದ ಸಮದಾಯ ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಘೋಷಣೆ ಕೂಗಿ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಕೂಡ ಪ್ರತಿಯಾಗಿ ಲಾಠಿಚಾರ್ಜ್ ನಡೆಸಿ ಅಶ್ರುವಾಯು ಸಿಡಿಸಿದ್ದಾರೆ. ಕಲ್ಲು ತೂರಾಟದಲ್ಲಿ 14 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿದೆ.

ಇನ್ನು ಉದಯಗಿರಿ ಪೊಲೀಸ್ ಠಾಣೆಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ 8 ಕ್ಕೂ ಹೆಚ್ಚು ಇನ್ಸ್ ಪೆಕ್ಟರ್ಸ್ ಹಾಗೂ 6 ಕೆಎಸ್ ಆರ್ ಪಿ ತುಕಡಿಗಳನ್ನ ಭದ್ರತೆಗೆ ನಿಯೋಜಿಸಲಾಗಿದೆ. ಈ ಮಧ್ಯೆ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದವರನ್ನ ಪತ್ತೆ ಮಾಡಲು ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

Key words: Stone, pelting, violence, Mysore, police station