ಮಡಿಕೇರಿ, ಆಗಸ್ಟ್ 05, 2019 (www.justkannada.in): ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿಯಲ್ಲಿ ಭೂ ಕುಸಿತ ಉಂಟಾಗಿದೆ. ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿ ಪಡಿಸುವ ಉದ್ದೇಶದಿಂದ 3 ದಿನ ವಾಹನ ಸಂಚಾರ ಬಂದ್ ಮಾಡಲಾಗಿದೆ.
ಆಗಸ್ಟ್ 5ರ ಮುಂಜಾನೆ ಸುರಿದ ಮಳೆಯಿಂದಾಗಿ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಕಡೆ ಭೂ ಕುಸಿತ ಉಂಟಾಗಿದೆ. ಕೊಡಗು ಜಿಲ್ಲಾಧಿಕಾರಿ ಅನ್ನೀಸ್ ಕನ್ಮಣಿ ಜಾಯ್, ತಹಶೀಲ್ದಾರ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಸ್ತೆಯನ್ನುತಾತ್ಕಾಲಿಕವಾಗಿ ದುರಸ್ತಿ ಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ 3 ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್’ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲ ರೀತಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮಾಂದಲ್ ಪಟ್ಟಿಗೆ ಪ್ರವೇಶ ನಿಷೇಧ: ಜೀಪ್ ಚಾಲಕರ ಆಕ್ರೋಶ
ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಜಿಲ್ಲಾಡಳಿತದ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.