ಮೈಸೂರು,ಜೂ,10,2020(www.justkannada.in): ಕೆ.ಅರ್.ಎಸ್ ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಮಾತ್ರ ಹಾಕಬೇಕು. ವಿಶ್ವೇಶ್ವರಯ್ಯ ಅವರ ಪ್ರತಿಮೆ ನಿರ್ಮಾಣ ಬೇಡ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಇತಿಹಾಸ ತಜ್ಞ ಪ್ರೊ. ನಂಜರಾಜ ಅರಸ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಕೆ ಮಾಡಲಾಯಿತು.
ಕೆ.ಆರ್.ಎಸ್ ಡ್ಯಾಂ ಬಳಿ ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಏಕಪ್ರತಿಮೆ ಹೋರಾಟ ಸಮಿತಿ ಸದಸ್ಯರು ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಅವರ ನೇತೃತ್ವದಲ್ಲಿ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೆ.ಅರ್.ಎಸ್ ನಲ್ಲಿ ನಾಲ್ವಡಿ ಕೃಷ್ಣರಾಜ ಅವರ ಪ್ರತಿಮೆ ಮಾತ್ರ ಹಾಕಬೇಕು. ಪ್ರತಿಮೆ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸರಿಯಿಲ್ಲ. ಬಿಜೆಪಿ ರಾಜವಂಶಸ್ಥರಿಗೆ ಅವಮಾನ ಮಾಡುತ್ತಿದೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಎಂದು ಸಿದ್ಧರಾಮಯ್ಯಗೆ ಮನವಿ ಮಾಡಿದರು. ಇನ್ನು ಈ ವಿಚಾರವಾಗಿ ಸಿಎಂಗೆ ಪತ್ರ ಬರೆಯುವುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದರು.
ಈ ವೇಳೆ ಬೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಜಿ.ವಿ.ಸೀತಾರಾಮ್, ನಂದೀಶ್ ಅರಸ್ , ನಾಯಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ದೇವಪ್ಪ ನಾಯಕ, ಅರವಿಂದ ಶರ್ಮ ಸೇರಿ ಇನ್ನಿತರರು ಉಪಸ್ಥಿತರಿದ್ದರು.
Key words: Vishweshwaraiah statue – KRS Dam- Former CM- Siddaramaiah- promised – letter – CM.