ಬೆಂಗಳೂರು,ಜು,12,2019(www.justkannada.in): ಕಾಂಗ್ರೆಸ್ ಮತ್ತು ಜೆಡಿಎಸ್ ಅತೃಪ್ತ ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಸಮ್ಮಿಶ್ರ ಸರ್ಕಾರವನ್ನ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿ ಮಾಡಿದ್ದಾರೆ.
ಇಂದು ಪದ್ಮನಾಭ ನಗರದಲ್ಲಿರುವ ನಿವಾಸಕ್ಕೆ ತೆರಳಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದು ಪ್ರಸಕ್ತರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಅತೃಪ್ತ ಶಾಸಕರ ಅರ್ಜಿ ವಿಚಾರಣೆ, ಇಂದು ನಡೆಯುವ ವಿಧಾನಮಂಡಲ ಅಧಿವೇಶನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹೆಚ್.ಡಿ ದೇವೇಗೌಡರ ಜತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚರ್ಚಿಸುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಇಂದು ವಿಧಾನಮಂಡಲ ಅಧಿವೇಶನವಿದೆ. ಜತೆಗೆ ಸ್ಪೀಕರ್ ವಿರುದ್ದ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯನ್ನ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿ ತೀರ್ಪು ನೀಡಲಿದೆ.
Key words: Visit -former Prime Minister -HD Deve Gowda- CM HD Kumaraswamy.