ಬೆಂಗಳೂರು,ಡಿಸೆಂಬರ್,16,2020(www.justkannada.in) : ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಭೇಟಿ ನೀಡಿದ ಸಂದರ್ಭದಲ್ಲಿ ಸೌಜನ್ಯಯುತವಾಗಿ ಹಾಗೂ ಸಮಾಧಾನವಾಗಿ ವರ್ತಿಸುವ ಕುರಿತು ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಹಾಗೂ ಅಧೀನ ಇಲಾಖೆಗಳ ಮುಖ್ಯಸ್ಥರ ಮೂಲಕ ಎಲ್ಲಾ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳಿಗೆ ತಿಳಿಸುವಂತೆ ಸೂಚಿಸಲಾಗಿದೆ.
ಸರ್ಕಾರಿ ಸೇವೆಯು ಸಾರ್ವಜನಿಕ ಸೇವೆಯಾಗಿರುವುದರಿಂದ, ಸಾರ್ವಜನಿಕರು ತಮ್ಮ ಸಮಸ್ಯೆ ಕುರಿತು ವ್ಯವಹರಿಸಲು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ, ಸಮಾಧಾನವಾಗಿ ವರ್ತಿಸಬೇಕು.
ತಾರತಮ್ಯ ಮಾಡದೇ ಬಂದವರೆಲ್ಲರಿಗೂ ಕುರ್ಚಿಗಳಲ್ಲಿ ಕುಳಿತುಕೊಳ್ಳಲು ಹೇಳುವಂತೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಸಿ.ಹರ್ಷರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
key words : Visit-Government-Offices-Be-Respectful-Subordinate-Secretary- Government-H.C.Harsharani-Note