ಬೆಂಗಳೂರು, ನವೆಂಬರ್,21,2022(www.justkannada.in): ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಬಿಬಿಎಂಪಿ ಮುಖ್ಯ ಆಯುಕ್ತರ ಕೈಗೆ ಸೇರಿದ್ದು, ಈ ಹಗರಣದಲ್ಲಿ ಬಿಬಿಎಂಪಿ ಅಧಿಕಾರಿಗಳೇ ಶಾಮೀಲಾಗಿರುವುದು ಬಹಿರಂಗವಾಗಿದೆ.
ತನಿಖಾ ವರದಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ಚಿಲುಮೆ ಸಂಸ್ಥೆಗೆ ಬಿಎಲ್ಒ ಎಂದು ಐಡಿ ಕಾರ್ಡ್ ಹಂಚಿಕೆ ಮಾಡಿರುವುದು ತಿಳಿದುಬಂದಿದೆ. ಈ ಹಿನ್ನೆಲೆ ಮಹಾದೇವಪುರ ವಲಯದ ಆರ್ಓ ಚಂದ್ರಶೇಖರ್, ಚಿಕ್ಕಪೇಟೆ ವಲಯದ ಆರ್ಓ ಭೀಮಾಶಂಕರ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಆರ್ಓ ಸುಹೇಲ್ ಅಹ್ಮದ್ ರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ , 4 ತಂಡಗಳ ತನಿಖಾ ವರದಿ ಬಿಬಿಎಂಪಿ ಕೈಸೇರಿದೆ. ಈ ವರದಿಗಳನ್ನು ಆಧರಿಸಿ ಬಿಬಿಎಂಪಿ ಅಂತಿಮ ವರದಿ ಸಿದ್ಧಪಡಿಸುತ್ತದೆ ಎಂದು ಹೇಳಿದ್ದಾರೆ.
Key words: Voter ID –Revision- Illegal –Case-Three ROs – suspended.