ನವದೆಹಲಿ,ಜುಲೈ,18,2022(www.justkannada.in): ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾನ ಶುರುವಾಗಿದೆ. ಸಂಸತ್ತು ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಮತ್ತು ಯುಪಿಎ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಸ್ಪರ್ಧಿಸಿದ್ದಾರೆ. ಸಂಸತ್ ಭವನ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯುತ್ತಿದ್ದು, ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆದು ಫಲಿತಾಂಶ ಹೊರ ಬೀಳಲಿದೆ.
ನೂತನ ರಾಷ್ಟ್ರಪತಿ ಆಯ್ಕೆಗೆ ಸುಮಾರು 4,800 ಚುನಾಯಿತ ಸಂಸದರು ಮತ್ತು ಶಾಸಕರು ಇಂದು ಚಲಾಯಿಸಲಿದ್ದಾರೆ. ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳಲಿದ್ದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Key words: Voting -election -new President -begun.