ಬೆಂಗಳೂರು,ಆಗಸ್ಟ್,6,2022(www.justkannada.in): ಸಂಭ್ರಮ ಸಡಗರದಿಂದ ಆಚರಿಸುವ ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದ್ದು, ಕೆಲವೇ ದಿನಗಳಷ್ಟೆ ಬಾಕಿ ಇದೆ. ಕೊರೋನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಸರಿಯಾಗಿ ಹಬ್ಬ ಆಚರಣೆ ಮಾಡಿಲ್ಲ. ಹೀಗಾಗಿ ಈ ಬಾರಿ ಅದ್ಧೂರಿಯಾಗಿ ಗಣೇಶ್ ಹಬ್ಬ ಆಚರಣೆಗೆ ಸಿದ್ಧತೆ ನಡೆಸಲಾಗುತ್ತಿದೆ.
ಆದರೆ ಈ ಕಳೆದ ಬಾರಿಯಂತೆ ಈ ಬಾರಿಯೂ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವಾರ್ಡ್ ಗೆ ಒಂದೇ ಗಣೇಶ ಕೂರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದ್ದಾರೆ.
ಈ ಸಂಬಂಧ ಗೌರಿ ಗಣೇಶ ಹಬ್ಬಕ್ಕೆ ನಿಯಮಗಳ ಬಗ್ಗೆ ಮಾತನಾಡಿರುವ ಅವರು, ಈ ವರ್ಷವೂ ವಾರ್ಡ್ ಗೆ ಒಂದೇ ಗಣೇಶ ಕೂರಿಸಬೇಕು. ಪಿಒಪಿ ಗಣೇಶವನ್ನು ಕೂರಿಸುವಂತಿಲ್ಲ. ಪಿಒಪಿ ಗಣೇಶ ತಯಾರಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
Key words: ward – only- one –Ganesha-BBMP- Chief Commissioner -Tushar Girinath.