ಬೆಂಗಳೂರು, ಮೇ 20,2019(www.justkannada.in): ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರವಾಗಿ ಪರಿಗಣಿಸಿದ್ದು, ಅವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ ವೀರೇಂದ್ರ ಹೆಗ್ಗಡೆಯವರು ಇನ್ನೊಂದು ಚೆಕ್ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
Key words: Water shortage in Dharmasthala: Talk to the Chief Secretary of the State with Virendra Heggade
#Water #Dharmasthala #Chief Secretary #vijaybaskar #Virendra Heggade