ಬೆಂಗಳೂರು,ಸೆಪ್ಟಂಬರ್,9,2021(www.justkannada.in): ಇನ್ನು ಮುಂದೆ ವಿದ್ಯುತ್ ಚಾಲಿತ ವಾಹನಗಳು ಅನಿವಾರ್ಯ. ಹೀಗಾಗಿ ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಹ ನೀಡುತ್ತೇವೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಮಾತನಾಡಿದ ಇಂಧನ ಸಚಿವ ಸುನೀಲ್ ಕುಮಾರ್, ವಿದ್ಯುತ್ ಚಾಲಿತ ವಾಹನಗಳಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ; ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯವಾಗಿರುವ ಕಾರಣ ನಾವು ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಾಹ ನೀಡಲಿದ್ದೇವೆ ಎಂದು ಹೇಳಿದರು.
ವಿದ್ಯುತ್ ಚಾಲಿತ ವಾಹನಗಳಿಗೆ ಬೇಕಾದ ಅಗತ್ಯ ಸೌಕರ್ಯ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಲಿದೆ. ಈ ವಾಹನಗಳ ಬಳಕೆ ಹೆಚ್ಚಾಗಲಿದ್ದು, ಭವಿಷ್ಯದಲ್ಲಿ ಇದು ಅನಿವಾರ್ಯವಾಗಲಿದೆ. ಹೀಗಾಗಿ ರೀ ಚಾರ್ಜಿಂಗ್ ಸೆಂಟರ್ ಸ್ಥಾಪಿಸಲು ಹೆಚ್ಚು ಒತ್ತು ನೀಡಲಿದ್ದೇವೆ. ಇದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ENGLISH SUMMARY..
‘We will encourage electric vehicles more’- Power Minister Sunil Kumar
Bengaluru, September 9, 2021 (www.justkannada.in): “Electric vehicles will become inevitable in the future. Hence, our government will give more preference for electric vehicles,” informed Power Minister Sunil Kumar.
Speaking in Bengaluru today, he informed that both the Union and State governments are taking measures to encourage the usage of electric vehicles, as it will become inevitable in the future. Our government is planning programs in order to provide all the required infrastructure for the usage and promotion of electric vehicles. In the future usage of electric vehicles will increase. Hence, our focus is on establishing recharging centers. It will also help the people a lot,” he added.
Keywords: Power Minister/ Sunil Kumar/ Electric vehicles/ encourage
Key words: We – promoting- electric –powered- vehicles-Minister – Sunil Kumar,